HomeKarnatakaBIG NEWS: ಸರ್ಕಾರಕ್ಕೆ ಚುನಾವಣಾ ಆಯೋಗದಿಂದ ನೋಟೀಸ್ ವಿಚಾರ; ಡಿಸಿಎಂ ಹೇಳಿದ್ದೇನು?

BIG NEWS: ಸರ್ಕಾರಕ್ಕೆ ಚುನಾವಣಾ ಆಯೋಗದಿಂದ ನೋಟೀಸ್ ವಿಚಾರ; ಡಿಸಿಎಂ ಹೇಳಿದ್ದೇನು?

ಬೆಂಗಳೂರು: ತೆಲಂಗಾಣ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅಲ್ಲಿ ಕರ್ನಾಟಕ ಸರ್ಕಾರದ ಯೋಜನೆಗಳನ್ನು ಪತ್ರಿಕೆಗಳಲ್ಲಿ ಜಾಹೀರಾತು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಮ್ಮ ಸರ್ಕಾರದ ಜಾಹೀರಾತಿನಲ್ಲಿ ನಮ್ಮ ಸಾಧನೆಗಳನ್ನು ಹೇಳಿಕೊಂಡಿದ್ದೇವೆಯೇ ಹೊರತು ಮತಯಾಚನೆ ಮಾಡಿಲ್ಲ. ಹೀಗಾಗಿ ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾಹೀರಾತಿನಲ್ಲಿ ಸರ್ಕಾರದ ಕೆಲಸದ ಬಗ್ಗೆ ಮಾಹಿತಿ ಇದೆ. ಕಾಂಗ್ರೆಸ್ ಪಕ್ಷಕ್ಕೆ ಅಥವಾ ಇಂತಹ ಅಭ್ಯರ್ಥಿಗಳಿಗೆ ಮತ ಹಾಕಿ ಎಂದು ನಾವು ಜಾಹಿರಾತಿನಲ್ಲಿ ತಿಳಿಸಿಲ್ಲ. ಇದು ನಿಯಮ ಉಲ್ಲಂಘನೆ ಹೇಗೆ ಆಗುತ್ತದೆ? ನಾವು ಪತ್ರಿಕೆ ಹಾಗೂ ಮ್ಯಾಗಜಿನ್ ಗಳಲ್ಲಿ ನೀಡುವ ಜಾಹೀರಾತು ಕೆಲವೊಮ್ಮೆ ತೆಲಂಗಾಣ, ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಗೂ ಹೋಗುತ್ತದೆ. ನಾವು ಮತ ಯಾಚನೆ ಮಾಡಿದ್ದರೆ ಆಗ ನಿಯಮ ಉಲ್ಲಂಘನೆ ಆಗುತ್ತಿತ್ತು. ಆದರೆ ನಾವು ಮತಯಾಚಿಸಿಲ್ಲ. ಹಾಗಾಗಿ ನೀತಿ ಸಂಹಿತೆ ಉಲ್ಲಂಘನೆ ಆಗಲ್ಲ. ಈ ಬಗ್ಗೆ ಚುನಾವಣಾ ಆಯೋಗದ ನೊಟೀಸ್ ಗೆ ನಾವು ಉತ್ತರ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular