HomeKarnatakaBIG NEWS: ನಿಗಮ ಮಂಡಳಿ ಪಟ್ಟಿ ಅಂತಿಮ ಮಾಡಿಕೊಂಡೇ ಬರುತ್ತೇವೆ ಎಂದ ಡಿಸಿಎಂ

BIG NEWS: ನಿಗಮ ಮಂಡಳಿ ಪಟ್ಟಿ ಅಂತಿಮ ಮಾಡಿಕೊಂಡೇ ಬರುತ್ತೇವೆ ಎಂದ ಡಿಸಿಎಂ


ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡೇ ಬರುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನಿಗಮ ಮಂಡಳಿ ನೇಮಕ ವಿಚಾರವಾಗಿ ಈಗಾಗಲೇ ಸಭೆ ಮಾಡಿ ಪಟ್ಟಿ ಕಳುಹಿಸಿಕೊಟ್ಟಿದ್ದೇವೆ. ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಈಗ ದೆಹಲಿಯಲ್ಲಿ ಪಟ್ಟಿ ಅಂತಿಮವಾಗಲಿದೆ ಎಂದು ತಿಳಿಸಿದರು.

ಇದೇ ವೇಳೆ ಮುಖ್ಯಮಂತ್ರಿಗಳ ಭೇಟಿಗೆ ಪ್ರಧಾನಿ ನರೇಂದ್ರ ಮೋದಿಯವರು ಸಮಯಾವಕಾಶ ನೀಡಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಪ್ರಧಾನಿಯವರನ್ನು ಭೇಟಿಯಾಗಲಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular