ಪ್ರಧಾನಿ ಮೋದಿ ಭೇಟಿಗೆ ನಾನೂ ಸಮಯ ಕೇಳಿದ್ದೇನೆ ಎಂದ ಡಿಸಿಎಂ

ನವದೆಹಲಿ: ನೀರಾವರಿ ಯೋಜನೆ ಹಾಗು ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ನಾನೂ ಸಮಯ ಕೇಳಿದ್ದೇನೆ. ಆದರೆ ಇನ್ನೂ ನಿಗದಿಯಾಗಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಸೇರಿದಂತೆ ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದೇನೆ. ಕೆಲ ಕೇಂದ್ರ ಸಚಿವರ ಭೇಟಿಗೂ ಸಮಯ ಕೇಳಿದ್ದೇನೆ ಎಂದರು.

ಪ್ರಧಾನಿ ಮೋದಿಯವರ ಭೇಟಿಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಮಯ ನೀಡಅಲಾಗಿದೆ. ಮುಖ್ಯಮಂತ್ರಿಗಳು ಬರ ಪರಿಹಾರ, ನರೇಗಾ ಯೋಜನೆಯಲ್ಲಿ ಮಾನವ ಕೂಲಿ ದಿನಗಳ ಹೆಚ್ಚಳ ಸೇರಿದಂತೆ ಇತರೆ ಪ್ರಮುಖ ವಿಚಾರವಾಗಿ ಚರ್ಚೆ ಮಾಡಲಿದ್ದಾರೆ ಎಂದು ತಿಳಿಸಿದರು.

ಇನ್ನು ಇಂದು ಕಾಂಗ್ರೆಸ್ ನಾಯಕರ ಜತೆ ಸಭೆ ನಡೆಯಲಿದೆ. ಯಾವೆಲ್ಲಾ ವಿಷಯ ಚರ್ಚೆ ಮಾಡುತ್ತೇವೆ ಎಂಬುದನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ನಿಗಮ, ಮಂಡಳಿಗಳಿಗೆ ಮೊದಲು ಶಾಸಕರ ನೇಮಕ ಆಗಲಿದೆ. ಸಾಧ್ಯವಾದರೆ ಕೆಲವು ಕಾರ್ಯಕರ್ತರ ನೇಮಕವನ್ನೂ ಮಾಡುತ್ತೇವೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read