HomeLatest NewsBIG NEWS: ಸಿಎಂ ಸಿದ್ದರಾಮಯ್ಯ ನಿಯಂತ್ರಣ ಕಳೆದುಕೊಂಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

BIG NEWS: ಸಿಎಂ ಸಿದ್ದರಾಮಯ್ಯ ನಿಯಂತ್ರಣ ಕಳೆದುಕೊಂಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದಲ್ಲಿ ನಿಯಂತ್ರಣ ಕಳೆದುಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಆಡಳಿತದಲ್ಲಿ ನಿಯಂತ್ರಣ ಕಳೆದುಕೊಂಡಿಲ್ಲ. ಆ ಬಗ್ಗೆ ನಾನು ಏನೂ ಹೇಳಿಲ್ಲ. ನಮಗೆ ಹೈಕಮಾಂಡ್ ಇದೆ. ಅವರು ಎಲ್ಲವನ್ನೂ ನೋಡಿಕೊಳ್ತಾರೆ ಎಂದರು.

ನಾನು ಎಲ್ಲರ ಜೊತೆ ಮಾತನಾಡುತ್ತೇನೆ ಏನೂ ಸಮಸ್ಯೆಗಳಿಲ್ಲ. ಆಡಳಿತದ ಮೇಲೆ ಕಂಟ್ರೋಲ್ ಕಳೆದುಕೊಂಡಿಲ್ಲ. ಅನಗತ್ಯವಾಗಿ ವಿಷಯ ದೊಡ್ದದು ಮಾಡುವ ಕೆಲಸ ನಡೆಯುತ್ತಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎತ್ತಿನಹೊಳೆ ಯೋಜನೆ ಕೆಲಸವಾಗಬೇಕು. ಇಂದು ಸಭೆ ಕರೆದಿದ್ದೆ. ಆದರೆ ಕೇಂದ್ರ ಸಚಿವ ವಿ.ಸೋಮಣ್ಣ ಮನವಿ ಮಾಡಿದ್ದು, ಸಭೆ ಮುಂದಕ್ಕೆ ಹಾಕಿದ್ದೇನೆ. ಏನು ಸಮಸ್ಯೆ ಎಂಬುದನ್ನು ನೋಡಲು ತುಮಕೂರಿಗೆ ಭೇಟಿ ನೀಡುತ್ತಿದ್ದೇನೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular