HomeKarnatakaBREAKING: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ರಾಜೀನಾಮೆ

BREAKING: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ರಾಜೀನಾಮೆ

ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಲೋಕಭವನದ ಗಾಜಿನ ಮಣೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಡಿ.ಕೆ.ಶಿವಕುಮಾರ್ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು.

ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿರುವ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಹೈಕಮಾಂಡ್ ನಾಯಕರಿಗೆ ರವಾನಿಸಿದ್ದಾರೆ.

ಡಿ.ಕೆ.ಶಿವಕುಮರ್ ಅವರಿಂದ ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಕ ಮಾಡುವುದು ಬಹುತೇಕ ಖಚಿತವಾಗಿದೆ. ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಗಾದಿ ಆಕಾಂಕ್ಷಿಯಾಗಿದ್ದರು. ಆದರೆ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನಕ್ಕೂ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಹೈಕಮಾಂಡ್ ನಾಯಕರು ಬಿ.ಕೆ.ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಏರಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular