HomeLatest NewsBREAKING: ಡಿಸಿಎಂ ಡಿ.ಕೆ.ಶಿವಕುಮಾರ್ ದಾವೊಸ್ ಪ್ರವಾಸ ದಿಢೀರ್ ರದ್ದು

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ದಾವೊಸ್ ಪ್ರವಾಸ ದಿಢೀರ್ ರದ್ದು

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ದಾವೊಸ್ ಪ್ರವಾಸ ರದ್ದಾಗಿದೆ. ಜನವರಿ 18ರಂದು ನಿಗದಿಯಾಗಿದ್ದ ವರ್ಲ್ಡ್ ಏಕನಾಮಿಕ್ ಫೋರಂ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ದಾವೊಸ್ ಗೆ ತೆರಳಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಪ್ರವಾಸ ರದ್ದಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಹಾಗೂ ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳು ಇರುವ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ದಾವೊಸ್ ಪ್ರವಾಸ ರದ್ದು ಮಾಡಿದ್ದಾರೆ ಎಂದು ತಿದುಬಂದಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿದ್ದು, ಎಐಸಿಸಿ ನಾಯಕರ ಜೊತೆಗಿನ ಸರಣಿ ಸಭೆಯಲ್ಲಿ ಭಾಗಿಯಾಗಿದ್ದಾರೆ. ಅಲ್ಲದೇ ಮನರೇಗಾ ಮರುಜಾರಿ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧದ ಅಭಿಯಾನದ ಜೊತೆಗೆ ಜ. 22ರಿಂದ ಆರಂಭವಾಗುವ ಐದು ದಿನಗಳ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ದಾವೋಸ್ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular