HomeKarnatakaಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ: ಸಿಎಂ ಡಿ.ಕೆ.ಶಿವಕುಮಾರ್ ಕಂಬನಿ

ಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ: ಸಿಎಂ ಡಿ.ಕೆ.ಶಿವಕುಮಾರ್ ಕಂಬನಿ

ಬೆಂಗಳೂರು: ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಎಲ್ಲರ ಮನಗೆದ್ದ ಗಾನಕೋಗಿಲೆ ಎಸ್ ಜಾನಕಿ ಅವರ ನಿಧ‌ನಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಕನ್ನಡ ಚಿತ್ರರಂಗದ ಮೇರುಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ತಮ್ಮ ಕಂಠಸಿರಿಯ ಮೂಲಕ ಕೋಟ್ಯಂತರ ಜನರ ಮನೆಮನಗಳಲ್ಲಿ ನೆಲೆಸಿದ್ದ ಬಹುಭಾಷಾ ಗಾಯಕಿ ಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ ಎಂದು ದು:ಖ ವ್ಯಕ್ತಪಡಿಸಿದ್ದಾರೆ.

ಅನೇಕ ಗಾಯಕರನ್ನು ಪ್ರೋತ್ಸಾಯಿಸಿ ಬೆಳೆಸಿದ, ಸರಳತೆಯ ಸಾಕಾರಮೂರ್ತಿ ಜಾನಕಮ್ಮನವರ ಅಪ್ರತಿಮ ಕಂಠಸಿರಿ ಕನ್ನಡ ನಾಡಿನ ಸಾಂಸ್ಕೃತಿಕ ಕ್ಷೇತ್ರದಲ್ಲಿ ಎಂದೆಂದಿಗೂ ಅಮರ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬವರ್ಗ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular