HomeLatest Newsಶೀಘ್ರದಲ್ಲಿ ಗೊಂದಲ ಇತ್ಯರ್ಥ: ಖರ್ಗೆ ಭರವಸೆಯೆಂದ ಸತೀಶ್ ಜಾರಕಿಹೊಳಿ: ಬಹಳ ಸಂತೋಷ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಶೀಘ್ರದಲ್ಲಿ ಗೊಂದಲ ಇತ್ಯರ್ಥ: ಖರ್ಗೆ ಭರವಸೆಯೆಂದ ಸತೀಶ್ ಜಾರಕಿಹೊಳಿ: ಬಹಳ ಸಂತೋಷ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಶೀಘ್ರದಲ್ಲಿಯೇ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಳ ಸಂತೋಷ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಗೊಂದಲ ಬಗೆಹರಿದರೆ ಸಂತೋಷ ಎಂದು ಹೇಳಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ಟ್ವಿಟರ್ ಪೋಸ್ಟ್ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

ಬಾಗಲಕೋಟೆ ಗಲಭೆ ವಿಚಾರವಾಗಿ, ನಿರಂತರ ಸಭೆಗಳ ಬಳಿಕ ಅಸ್ಸಾಂನಿಂದ ನಿನ್ನೆ ತಡ ರಾತ್ರಿ ನಾನು ಬೆಂಗಳೂರಿಗೆ ಮರಳಿದ್ದೇನೆ. ಬಹಳ ಆಯಾಸವಾಗಿದೆ. ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular