ಬೆಂಗಳೂರು: ಇಂದು ಸಂಜೆ 4.5ಕ್ಕೆ ಡಿ.ಕೆ.ಶಿವಕುಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರಿಸಲಿದ್ದಾರೆ. ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿದರು.
ಇಂದು ಸಂಜೆ ಲೋಕಭವನದಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರುವಂತೆ ಖುದ್ದು ಆಹ್ವಾನಿಸಿದರು. ಈ ವೇಳೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಜಿ.ಪಮೇಶ್ವರ್ ಕೂದ ಉಪಸ್ಥಿತರಿದ್ದರು.
ಸಿದ್ದರಾಮಯ್ಯ ಅವರು ಇಬ್ಬರಿಗೂ ಅಭಿನಂದಿಸಿ ಶುಭಕೋರಿದರು. ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

