ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನನಗೆ ದೀಕ್ಷೆ ಕೊಟ್ಟಿದ್ದಾರೆ. ಅವರು ಕೊಟ್ಟ ದೀಕ್ಷೆ, ಜವಾಬ್ದಾರಿಗಳನ್ನು ಸಂತೋಷದಿಂದ ನಾನು ಸ್ವೀಕರಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಯಿಂದ ವಾಪಸ್ ಆದ ಬಳಿಕ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ಮಲ್ಲಿಕಾರ್ಜುನ ಖರ್ಗೆ ನನಗೆ ದೀಕ್ಷೆ ಕೊಟ್ಟಿದ್ದಾರೆ. ಅದನ್ನು ಸಂತೋಷದಿಂದ ಸ್ವೀಕರಿಸಿದ್ದೇನೆ. ಪಕ್ಷ ಸಂಘಟನೆ ಮುಖ್ಯ. ನಾನು ಪಕ್ಷದ ರಾಜ್ಯ ಅಧ್ಯಕ್ಷ. ಪಕ್ಷ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇನೆ ಎಂದರು.
ನಾನು ನಿನ್ನೆ ಬ್ಯುಸಿ ಇದ್ದೆ. ಅದರ ಮಧ್ಯೆ ಮುಖ್ಯಮಂತ್ರಿಗಳ ಹೇಳಿಕೆ ನೋಡಿದೆ. ಮಾಧ್ಯಮಗಳ ಪ್ರಶ್ನೆಗಳಿಗೆ ಅವರೇ ಉತ್ತರ ನೀಡಿದ್ದಾರೆ. ಅವರು ಉತ್ತರ ನೀಡಿದ ಮೇಲೆ ನಾವು ಮತ್ತೆ ಆ ವಿಚಾರ ಚರ್ಚೆ ಮಾಡುವುದು ಸೂಕ್ತವಲ್ಲ. ನೀವುಗಳು ಸಹ ಮತ್ತೆ ಆ ವಿಚಾರವಾಗಿ ಪ್ರಶ್ನೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದರು.
You Might Also Like
TAGGED:ಡಿ.ಕೆ.ಶಿವಕುಮಾರ್