HomeKarnatakaನಮ್ಮ ಪ್ರತಿಭಟನೆ ಎಲ್ಲಿ ಮಾಡಬೇಕೋ ಅಲ್ಲಿ ನ್ಯಾಯಬದ್ಧವಾಗಿ ಮಾಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇಕೆ?

ನಮ್ಮ ಪ್ರತಿಭಟನೆ ಎಲ್ಲಿ ಮಾಡಬೇಕೋ ಅಲ್ಲಿ ನ್ಯಾಯಬದ್ಧವಾಗಿ ಮಾಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇಕೆ?

ಬೆಂಗಳೂರು: ಎಸ್ ಐಆರ್ ವಿಚಾರವಾಗಿ ವಿಪಕ್ಷಗಳ ಟೀಕೆಗಳಿಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದವರಿಗೆ ಅರೋಪ ಮಾಡುವುದೇ ಕೆಲಸ ಎಂದು ಟಾಂಗ್ ನೀಡಿದ್ದಾರೆ.

ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಎಸ್ಐಆರ್ ಪ್ರಕ್ರಿಯೆಯನ್ನು ಮನೆ ಮನೆಗೆ ಹೋಗಿ ಮಾಡದೇ ಒಂದೇ ಕಡೆ ಮಾಡಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪದ ಬಗ್ಗೆ, ಆರೋಪ ಮಾಡುವುದೇ ಅವರ ಕೆಲಸ ಎಂದರು.

ಸರ್ಕಾರದ ವತಿಯಿಂದ ನಾವು ಎಲ್ಲರಿಗೂ ನ್ಯಾಯ ಒದಗಿಸಿಕೊಡಬೇಕು ಹಾಗೂ ಎಲ್ಲರೂ ತಮ್ಮ ಮತದಾನದ ಹಕ್ಕು ಉಳಿಸಿಕೊಳ್ಳಿ ಎಂದು ಮನವಿ ಮಾಡಿದ್ದೇವೆ. ನಮ್ಮದೂ ಪ್ರತಿಭಟನೆ ಇದೆ. ಅದನ್ನು ನ್ಯಾಯಬದ್ಧವಾಗಿ ಪ್ರತಿಭಟಿಸಬೇಕೋ ಪ್ರತಿಭಟಿಸುತ್ತೇವೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular