HomeKarnatakaBIG NEWS: ತಮಿಳುನಾಡು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿಲ್ಲ: ಪಕ್ಷ ಹೇಳಿದಂತೆ ಕೇಳುವೆ ಎಂದ ಡಿಸಿಎಂ...

BIG NEWS: ತಮಿಳುನಾಡು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿಲ್ಲ: ಪಕ್ಷ ಹೇಳಿದಂತೆ ಕೇಳುವೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ತಮಿಳುನಾಡಿನ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂಬುದು ಸುಳ್ಳು. ನಾನು ಪಕ್ಷ ಹೇಳಿದಂತೆ ಕೇಳುವೆ, ತಮಿಳುನಾಡು ವಿಚಾರ ನನಗೆ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ತಮಿಳುನಾಡಿನ ಶಾಸಕರು ಈಗಲ್ ಟನ್ ರೆಸಾರ್ಟ್ ಗೆ ಬಂದಿದ್ದಾರೆ ಎಂಬ ವದಂತಿ ವಿಚಾರವಾಗಿ ಯಾವ ಶಾಸಕರೂ ಈಗಲ್ ಟನ್ ರೆಸಾರ್ಟ್ ಗೆ ಬಂದಿಲ್ಲ. ಈ ಬಗ್ಗೆ ನನಗೆ ಗೊತ್ತಿಲ್ಲ. ಮಾಹಿತಿ ಇದ್ದಿದ್ದರೆ ನಾನು ಹೇಳುತ್ತಿದ್ದೆ. ನವೀಕರಣ ಹಿನ್ನೆಲೆಯಲ್ಲಿ ಈಗಲ್ ಟನ್ ರೆಸಾರ್ಟ್ ಮುಚ್ಚಲಾಗಿದೆ. ಕೆಲವರು ಹೈದರಾಬಾದ್ ಗೆ ಹೋಗಿದ್ದಾರೆ ಎಂದರೆ ಮತ್ತೆ ಕೆಲವರು ಬೆಂಗಳೂರಿಗೆ ಬಂದಿದ್ದಾರೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ನೋಡಿದೆ. ಪಕ್ಷದ ಹೈಕಮಾಂಡ್ ನಾಯಕರು ಏನಾದರೂ ನಿರ್ದೇಶನ ನೀಡಿದರೆ ನಾನು ಅದನ್ನು ಪಾಲಿಸುವೆ. ಆದರೆ ಈವರೆಗೆ ಹೈಕಮಾಂಡ್ ನಾಯಕರು ನನ್ನ ಜೊತೆ ಏನೂ ಮಾತನಾಡಿಲ್ಲ. ಪಕ್ಷದ ನಾಯಕರ ನಿರ್ದೇಶನದಂತೆ ನಾನು ತಮಿಳುನಾಡಿನಲ್ಲಿ ಪ್ರಣಾಳಿಕೆ ಬಿಡುಗಡೆ ಹಾಗೂ ಪ್ರಚಾರಕ್ಕೆ ಹೋಗಿದ್ದೆ. ಅದಾದ ನಂತರ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.

ಇನ್ನು ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮದ ವಿಚಾರವಾಗಿ ಅವರು ರಾಜ್ಯದ ಸೇವೆ ಮಾಡಿದ್ದಾರೆ. ಅವರ ಜನ್ಮದಿನವಿದ್ದರೆ ಅವರಿಗೆ ಒಳ್ಳೆಯದಾಗಲಿ. ಅವರ ಪಕ್ಷದವರು ಪಕ್ಷ ಸಂಘಟನೆ ಹಾಗೂ ಅವರಿಗೆ ಗೌರವ ನೀಡುತ್ತಿದ್ದಾರೆ. ಅದರಲ್ಲಿ ತಪ್ಪೇನಿಲ್ಲ. ಅವರಿಗೆ ಉತ್ತಮ ಆರೋಗ್ಯ ಸಿಗಲಿ ಎಂದು ಆಶಿಸುತ್ತೇನೆ. ಭಗವಂತ ಅವರಿಗೆ ಹೆಚ್ಚಿನ ಆಯಸ್ಸು ನೀಡಲಿ. ರಾಜಕೀಯವಾಗಿ ಅವರ ವಿಚಾರಧಾರೆ ಬೇರೆ, ನಮ್ಮ ವಿಚಾರಧಾರೆ ಬೇರೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುದುಚೆರಿ ಪ್ರವಾಸದ ವಿಚಾರವಾಗಿ ನಾನು ಬಹಳ ದಿನಗಳಿಂದ ದೇವಾಲಯಕ್ಕೆ ಹೋಗಿರಲಿಲ್ಲ. ಹೀಗಾಗಿ ಶನೇಶ್ವರ ದೇವಾಲಯಕ್ಕೆ ಹೋಗುತ್ತಿದ್ದೇನೆ ಎಂದು ತಿಳಿಸಿದರು.

ಕೇರಳಂ ಸಿಎಂ ಆಯ್ಕೆ ವಿಚಾರವಾಗಿ ಕೇಳಿದಾಗ, ನಮ್ಮ ಎಲ್ಲಾ ನಾಯಕರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ. ಅದು ಎಲ್ಲಾ ಪಕ್ಷಗಳಲ್ಲೂ ನಡೆಯುವ ಪ್ರಕ್ರಿಯೆ ಎಂದರು.

ಆರ್. ಅಶೋಕ್ ಅವರು ಶಾಸಕರಾದ ಕಾಶಪ್ಪನವರು ಐಪಿಎಲ್ ಟಿಕೆಟ್ ಕೇಳಿದ್ದರು. ಈಗ ಅದನ್ನು ನನ್ನ ಮೇಲೆಯೇ ಹಾಕಿಕೊಂಡಿದ್ದೇನೆ. ಗುಜರಾತಿನವರಿಗೆ ಟಿಕೆಟ್ ಗಳು ಹೆಚ್ಚಾಗಿ ಬೇಕಾಗಿತ್ತು, ವ್ಯಾಪಾರ ಜಾಸ್ತಿ ಆಗಬೇಕಿತ್ತು. ಅದಕ್ಕೆ ಈ ರೀತಿ ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ನಾವು ಕೇಳಿದ್ದ 300 ಟಿಕೆಟ್ ದೊಡ್ಡದಾಯ್ತಾ? ಬೇರೆ ರಾಜ್ಯಗಳಲ್ಲಿ 60% ಟಿಕೆಟ್ ಅನ್ನು ರಾಜ್ಯ ಸರ್ಕಾರಗಳಿಗೆ ಕೊಡುತ್ತಿದ್ದಾರೆ. ನಾನು ಕರ್ನಾಟಕದ ಪ್ರತಿನಿಧಿಯಾಗಿ ಶಾಸಕರು ಏನು ಹೇಳುತ್ತಾರೋ ಅದನ್ನು ಮಾಡಿದ್ದೇನೆ. ಎಲ್ಲಾ ಪಕ್ಷದವರು ಸೇರಿ ಬೇಡಿಕೆ ಇಟ್ಟರಲ್ಲವೇ? ದಳದವರಿಗೆ ಬೇಡವಾದರೆ ತಮ್ಮ ಪಕ್ಷದ ಶಾಸಕರಿಗೆ ಟಿಕೆಟ್ ಬೇಡ ಎಂದು ವಾಪಸ್ ನೀಡಲಿ. ನಾನು ನನಗಾಗಿ ಟಿಕೆಟ್ ಕೇಳಿದ್ದೀನಾ? ನಮ್ಮ ಜನಪ್ರತಿನಿಧಿಗಳು ಮನವಿ ಮಾಡಿದ್ದಕ್ಕೆ ಕೇಳಿದೆ. ಈ ಹಿಂದೆ ಶಾಸಕರಿಗೆ 2 ಟಿಕೆಟ್ ನೀಡುತ್ತಿದ್ದರು. ಈಗ ಮೂರು ಟಿಕೆಟ್ ನೀಡಿ ಎಂದು ಹೇಳಿರುವೆ ಎಂದು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular