HomeKarnatakaBREAKING: ಸಿಎಂ ಡಿ.ಕೆ.ಶಿವಕುಮಾರ್ ಮನೆ ಹಿಂಭಾಗದ ರಸ್ತೆಯಲ್ಲಿ ಮಾಟ-ಮಂತ್ರ, ವಾಮಾಚಾರ ಶಂಕೆ: ಸಾರ್ವಜನಿಕರಲ್ಲಿ ಆತಂಕ

BREAKING: ಸಿಎಂ ಡಿ.ಕೆ.ಶಿವಕುಮಾರ್ ಮನೆ ಹಿಂಭಾಗದ ರಸ್ತೆಯಲ್ಲಿ ಮಾಟ-ಮಂತ್ರ, ವಾಮಾಚಾರ ಶಂಕೆ: ಸಾರ್ವಜನಿಕರಲ್ಲಿ ಆತಂಕ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆಯ ಹಿಂಭಾಗದ ರಸ್ತೆಯಲ್ಲಿ ಯಾರೋ ಮಾಟ, ಮಂತ್ರ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಸದಾಶಿವ ನಗರದಲ್ಲಿರುವ ಸಿಎಂ ಡಿ.ಕೆ.ಶಿವಕುಮಾರ್ ನಿವಾಸದ ಹಿಂಭಾಗದಲ್ಲಿ ಈ ಘಟನೆ ನಡೆದಿದೆ.

ಸದಾಶಿವನಗರದ ಜಿಬಿಎ ಮೈದಾನದ ಮುಂಭಾಗದಲ್ಲಿ ವೃತ್ತಾಕಾರ ಹಾಕಿ, ಕೋಳಿ ಕೊಯ್ದು, ನಿಂಬೆಹಣ್ಣುಗಳನ್ನಿಟ್ಟು ಹೋಗಿದ್ದಾರೆ. ವಾಮಾಚಾರ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಜನರು ಓಡಾಡುವ ಜಾಗದಲ್ಲಿಯೇ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದು, ಮಕ್ಕಳು, ಸಾರ್ವಜನಿಕರಲ್ಲಿ ಆತಂಕವುಂಟಾಗಿದೆ.

ಜಿಬಿಎ ಮೈದಾನದ ಮುಂಭಾಗದ ರಸ್ತೆಯಲ್ಲಿ ಜನರು ಓಡಾಡಲು ಭಯಪಡುತ್ತಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿದ್ದ ನಿಂಬೆಹಣ್ಣು, ಕೋಳಿಗಳನ್ನು ತೆರವುಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular