HomeKarnatakaಡಿಸಿಎಂ ಹುದ್ದೆ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡುವವರು ಹೈಕಮಾಂಡ್ ನಾಯಕರ ಬಳಿ ಮಾತನಾಡಲಿ: ಡಿ.ಕೆ.ಶಿವಕುಮಾರ್ ತಿರುಗೇಟು

ಡಿಸಿಎಂ ಹುದ್ದೆ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡುವವರು ಹೈಕಮಾಂಡ್ ನಾಯಕರ ಬಳಿ ಮಾತನಾಡಲಿ: ಡಿ.ಕೆ.ಶಿವಕುಮಾರ್ ತಿರುಗೇಟು

ಬೆಂಗಳೂರು: ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ನಡೆಯುತ್ತಿರುವ ಚರ್ಚೆ ಬಗ್ಗೆ ಪ್ರತಿಕ್ರಿಯಿಸುತ್ತಾ, ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನೂ ಚರ್ಚೆ ಮಾಡಲ್ಲ. ಯಾರು ಬೇಕಾದರೂ ಹೈಕಮಾಂಡ್ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ ಎಂದರು.

ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ವಿಚಾರವಾಗಿ. ಬದಲಾವಣೆ ಮಾಡಿದರೆ ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿಗೆ ಹೋಗಲಿ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular