ಬೆಂಗಳೂರು: ಬಮೂಲ್ ಅಧ್ಯಕ್ಷ ಸ್ಥಾನದ ಮೇಲೆ ಮಾಜಿ ಸಂಸದ ಡಿ.ಕೆ. ಸುರೇಶ್ ಕಣ್ಣಿಟ್ಟಿದ್ದು, ಇಂದು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಸುರೇಶ್ ಇಂದು ಬೆಳಿಗ್ಗೆ 10.30 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಬೆಂಗಳೂರು ಡೇರಿ ವೃತ್ತದಲ್ಲಿರುವ ಕಚೇರಿಯಲ್ಲಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸದ್ದು, ಒಟ್ಟು 14 ನಿರ್ದೇಶಕರನ್ನು ಬಮೂಲ್ ಒಳಗೊಂಡಿದೆ.
ಬಹುತೇಕ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಆಯ್ಕೆ ಖಚಿತವಾಗಿದೆ. ಅವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ತಿಂಗಳು ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿತ್ತು.