HomeKarnatakaBIG NEWS: ದೇಶ ವಿಭಜನೆ ಬಗ್ಗೆ ಮಾತನಾಡಿಲ್ಲ; ಹೇಳಿಕೆಗೆ ಬದ್ಧ ಎಂದ ಸಂಸದ ಡಿ.ಕೆ.ಸುರೇಶ್

BIG NEWS: ದೇಶ ವಿಭಜನೆ ಬಗ್ಗೆ ಮಾತನಾಡಿಲ್ಲ; ಹೇಳಿಕೆಗೆ ಬದ್ಧ ಎಂದ ಸಂಸದ ಡಿ.ಕೆ.ಸುರೇಶ್

ಬೆಂಗಳೂರು: ಕೇಂದ್ರದಿಂದ ಅನುದಾನ ಬಿಡುಗಡೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ದೇಶ ವಿಭಜನೆ ಮಾತುಗಳನ್ನಾಡಿದ್ದ ಸಂಸದ ಡಿ.ಕೆ.ಸುರೇಶ್, ಇದೀಗ ತಾನು ದೇಶ ವಿಭಜನೆ ಹೇಳಿಕೆ ನೀಡಿಲ್ಲ ಎಂದು ಮತ್ತೊಮ್ಮೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಡಿ.ಕೆ.ಸುರೇಶ್, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ. ದೇಶ ವಿಭಜನೆ ಮಾತನಾಡಿಲ್ಲ ಎಂದು ಪುನರುಚ್ಛರಿಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಬೇಕಾದ ಅನುದಾನ ನೀಡದೇ ಮೋಸ ಮಾಡುತ್ತಿದೆ. ನಮ್ಮ ರಾಜ್ಯದಿಂದ ಕೇಂದ್ರಕ್ಕೆ ಹೆಚ್ಚು ತೆರಿಗೆ ಹೋಗುತ್ತದೆ. ಆದರೆ ನಮಗೆ ಬರಬೇಕಿದ್ದ ನ್ಯಾಯ ಸಮ್ಮತ ಪಾಲನ್ನು ಕೇಂದ್ರ ನೀಡುತ್ತಿಲ್ಲ. ಕರ್ನಾಟಕದ ಜನರ ತೆರಿಗೆ ಪೋಲಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಗುಜರಾತ್ ಅಭಿವೃದ್ಧಿ ಆಗುತ್ತದೆ. ಉತ್ತರ ಭಾರತದ ರಾಜ್ಯಗಳು ಅಭಿವೃದ್ಧಿಯಾಗುತ್ತದೆ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular