HomeKarnatakaBIG NEWS: ಬಿಜೆಪಿಯವರಿಗೆ ಆಪರೇಷನ್ ಕಮಲ ಬಿಟ್ರೆ ಬೇರೆ ಏನಾದರೂ ಗೊತ್ತಿದೆಯಾ? ಡಿ.ಕೆ. ಸುರೇಶ್ ವಾಗ್ದಾಳಿ

BIG NEWS: ಬಿಜೆಪಿಯವರಿಗೆ ಆಪರೇಷನ್ ಕಮಲ ಬಿಟ್ರೆ ಬೇರೆ ಏನಾದರೂ ಗೊತ್ತಿದೆಯಾ? ಡಿ.ಕೆ. ಸುರೇಶ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರಿಗೆ ಆಪರೇಷನ್ ಬಿಟ್ಟರೆ ಬೇರೆ ಏನಾದರೂ ಗೊತ್ತಿದೆಯಾ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯಿಂದ ಮತ್ತೆ ಆಪರೇಷನ್ ಕಮಲ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಡಿ.ಕೆ.ಸುರೇಶ್, ಜನರಿಗೆ ಏನು ಬೇಕು ಅದನ್ನು ಮಾಡುವುದು ಬಿಜೆಪಿಗೆ ಗೊತ್ತಿಲ್ಲ. ಆಪರೇಷನ್ ಕಮಲ ಬಿಟ್ಟರೆ ಬೇರೇನು ಗೊತ್ತು? ಎಂದು ಕೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯವರು ಭ್ರಷ್ಟಾಚಾರದಲ್ಲಿ ಮುಳುಗಿದ್ದರಿಂದ ಇಂದು ಕೆಲಸ ಇಲ್ಲದೇ ಕೂತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಯವರಿಗೆ ಆಘಾತವಾಗಿದೆ. ಆಘಾತ ತಪ್ಪಿಸಿಕೊಳ್ಳಲು ಆಪರೇಷನ್ ಕಮಲದ ಹೆಸರು ಹೇಳುತ್ತಿದ್ದಾರೆ ಎಂದರು.

ವಿಪಕ್ಷ ನಾಯಕರು ಇದ್ದಾರೋ ಇಲ್ಲವೋ ಅವರಿಗೆ ಬಿಟ್ಟದ್ದು. ಆದರೆ ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದರೂ ಇಟ್ಟುಕೊಂಡು ನಮ್ಮ ತಟ್ಟೆಯಲ್ಲಿನ ಜಿರಳೆ ಹುಡುಕಿದರೆ ನಾವೇನು ಮಾಡಲು ಆಗುತ್ತೆ? ಎಂದು ವ್ಯಂಗ್ಯವಾಡಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular