BIG NEWS: ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವ ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವಕನ ಮೇಲೆ ಚಾಕು ಇರಿದ ಆರೋಪ ಕೇಳಿಬಂದಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ನಡೇಮಾವಿನಪುರದಲ್ಲಿ ಬಿಜೆಪಿಯ ಮೂವರು ಕಾರ್ಯಕರ್ತರು ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೀರ್ತಿ ಎಂಬುವವರಿಗೆ ಚಾಕು ಇರಿದಿದ್ದಾರೆ ಎಂದು ಆರೋಪಿಸಲಾಗಿದೆ.

ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಗೆ ಯಾಕೆ ಹೋಗಿದ್ದೆ ಎಂದು ಕ್ಯಾತೆ ತೆಗೆದು ಗಲಾಟೆ ಮಾಡಿದ್ದಾರೆ. ಈ ವೇಳೆ ಮಾತಿನಚಕಮಕಿ ತಾರಕಕ್ಕೇರಿದ್ದು, ಯುವಕ ವೆಂಕಟಗೌಡನಪಾಳ್ಯದ ಕೀರ್ತಿ ಎಂಬಾತನಿಗೆ ಚಾಕು ಇರಿಯಲಾಗಿದೆ. ಚಂದ್ರು, ಜಗದೀಶ್, ಸುನೀಲ್ ಎಂಬ ಮೂವರು ಈ ಕೃತ್ಯವೆಸಗಿದ್ದಾರೆ. ರಾಜಕೀಯ ವೈಷ್ಯಮ್ಯದಿಂದ ತನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾಗಿ ಆರೋಪಿಸಿ ಕೀರ್ತಿ ದೂರು ದಾಖಲಿಸಿದ್ದಾರೆ.

ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳು ಕೀರ್ತಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read