HomeLatest NewsBREAKING: ಡಿ.ರೂಪಾ, ರೋಹಿಣಿ ಸಿಂಧೂರಿ ಸೇರಿದಂತೆ ಹಲವು IPS, IAS ಅಧಿಕಾರಿಗಳ ದಿಢೀರ್ ವರ್ಗಾವಣೆ :...

BREAKING: ಡಿ.ರೂಪಾ, ರೋಹಿಣಿ ಸಿಂಧೂರಿ ಸೇರಿದಂತೆ ಹಲವು IPS, IAS ಅಧಿಕಾರಿಗಳ ದಿಢೀರ್ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಡಿ.ರೂಪಾ, ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಿಯ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಐಪಿಎಸ್ ಅಧಿಕಾರಿ ಡಿ.ರೂಪಾ ಅವರನ್ನು ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಕೃಷಿ ಇಲಾಖೆ ಕಾರ್ಯದರ್ಶಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಕಾರ್ಮಿಕ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಡಾ.ಪ್ರಸಾದ್ ಅವರನ್ನು ಬಿಡುಗಡೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐಎಎಸ್ ಅಧಿಕಾರಿ ಅಕ್ರಂ ಪಾಷಾ ಅವರನ್ನು ಕೆ ಎಸ್ ಆರ್ ಟಿಸಿಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಐಪಿಎಸ್ ಅಧಿಕಾರಿ ಶೆಟ್ಟಣ್ಣವರ್ ಎಸ್ ಬಿ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ನೇಮಕಮಾಡಿ ಆದೇಶ ಹೊರಡಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular