BREAKING : ಮಾಜಿ ಶಾಸಕ ಡಿ.ಎಸ್ ವೀರಯ್ಯಗೆ ಜು. 30 ರವರೆಗೆ ನ್ಯಾಯಾಗ ಬಂಧನ |D. S. Veeraiah

ಬೆಂಗಳೂರು: ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಬಂಧಿಸಲಾಗಿದ್ದು, ಇದೀಗ ಅವರನ್ನು ಜುಲೈ 30 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ. ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಿರುವ ಪೊಲೀಸರು ಇಂದು ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಜುಲೈ 30 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ವೀರಯ್ಯ ಅಧ್ಯಕ್ಷರಾಗಿದ್ದಾಗ 47 ಕೋಟಿ ರೂಪಾಯಿ ಹಗರಣ ನಡೆದ ಆರೋಪವಿದ್ದು, ತನಿಖೆ ನಡೆಸಿದ ಸಿಐಡಿ ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಬಂಧಿಸಿತ್ತು.

2021 ರಿಂದ 2023ರ ನಡುವೆ ನಡೆದಿದೆ ಎನ್ನಲಾಗಿರುವ ಅಕ್ರಮದ ಕುರಿತಾಗಿ ಹಾಲಿ ವ್ಯವಸ್ಥಾಪಕ ನಿರ್ದೇಶಕರು ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದ್ದರು. 2023ರ ಸೆಪ್ಟಂಬರ್ 23ರಂದು ಎಫ್ಐಆರ್ ದಾಖಲಾಗಿದ್ದು, ಇದೇ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.ಅಕ್ರಮ ಪ್ರಕರಣದ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳ ತಂಡ ದೂರುದಾರರಿಂದ ಮಾಹಿತಿ ಪಡೆದುಕೊಂಡು 600ಕ್ಕೂ ಹೆಚ್ಚು ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸಿತ್ತು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read