HomeKarnatakaBREAKING: ಡಿ. ಉಮಾಪತಿಗೆ ರಾಜ್ಯ ಸರ್ಕಾರದ ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ ಘೋಷಣೆ

BREAKING: ಡಿ. ಉಮಾಪತಿಗೆ ರಾಜ್ಯ ಸರ್ಕಾರದ ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ ಘೋಷಣೆ

ಬೆಂಗಳೂರು: ಪತ್ರಕರ್ತ ಡಿ. ಉಮಾಪತಿ ಅವರಿಗೆ ರಾಜ್ಯ ಸರ್ಕಾರದ “ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ ,ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ,ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು 2024 ರ ಆಯವ್ಯಯದಲ್ಲಿ  ಹಿರಿಯ ಪತ್ರಕರ್ತ “ವಡ್ಡರ್ಸೆ ರಘುರಾಮಶೆಟ್ಟಿ” ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು. ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರ್ಚ್ 18, 1959ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಎಂ.ಎಂ ಸ್ನಾತಕೋತ್ತರ ಪದವಿಯಲ್ಲಿ ಎರಡನೆ ರ‍್ಯಾಂಕ್ ಪಡೆದವರು.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಸಮೂಹ ಸಂಸ್ಥೆ ಯ ಕನ್ನಡ ಪ್ರಭ, ಈ ಟಿವಿ, ಯ ದೆಹಲಿ ಕರೆಸ್ಪಾಂಡೆಂಟ್ ಅಗಿ 27 ವರ್ಷಗಳ ಪರಿಣಾಮಕಾರಿ ವರದಿಗಳಿಂದ ಹೆಸರುಗಳಿಸಿದವರು.

ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು, ಸುಪ್ರೀಂ ಕೋರ್ಟ್ ನಲ್ಲಿನ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು, ಮತ್ತು ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ.

ದೆಹಲಿಯಲ್ಲಿದ್ದು ರಾಷ್ಟ್ರೀಯ ಪತ್ರಕರ್ತರಾಗಿರುವ ಉಮಾಪತಿ ಅವರು ಅಂದೋಲನ, ರೈತ ಚಳವಳಿ, ವಿಜಯ ಕರ್ನಾಟಕ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ. ಪ್ರಸ್ತುತ ’ನ್ಯಾಯಪಥ(ಗೌರಿ ಮಿಡಿಯಾ)’ ಮತ್ತು ’ಈದಿನ’ ವೆಬ್ ಜರ‍್ನಲ್ ನ ಸಂದರ್ಶಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರ ಸೇವೆ. ವಿದ್ವತ್ ಪೂರ್ಣ ಸಾಧನೆಯನ್ನು ಗುರುತಿಸಿ ಅನೇಕ ಪ್ರಶಸ್ತಿ – ಸಮ್ಮಾನಗಳು ಮುಡಿಗೇರಿವೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಅಂಬೇಡ್ಕರ್ ಪ್ರತಿಷ್ಠಾನದ ಭೋಧಿವರ್ಧನ ಪ್ರಶಸ್ತಿ, ಎಸ್ಸಿ/ಎಸ್ಟಿ ಎಡಿಟರ್ ಅಸೋಸಿಯೇಷನ್‌ನ ’ಬಿ. ರಾಚಯ್ಯ ಪ್ರಶಸ್ತಿ’ ಪ್ರೆಸ್ ಕ್ಲಬ್ ಬೆಂಗಳೂರು ನ ಜೀವಮಾನಸಾಧನೆ ಪ್ರಶಸ್ತಿ, ಇಂಡಿಯನ್ ಎಕ್ಸ್ ಪ್ರೆಸ್ ಗ್ರೂಪ್ ನೀಡುವ ಸಂಪಾದಕ ಮಂಡಳಿ ಆಯ್ಕೆಯ ಅತ್ಯುತ್ತಮ ಶ್ರಮಜೀವಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ನ ನಾಡಿಗೇರಿ ಕಿಟ್ಟಪ್ಪ ದತ್ತಿ ಪ್ರಶಸ್ತಿ, ಕರ್ನಾಟಕ ಸರ್ಕಾರದ ಕನ್ನಡ ರಾಜ್ಯೋತ್ಸವ ಪ್ರಶಸಿಗಳಿಂದ ಪುರಸ್ಕೃತರಾಗಿರುವುದು ಅವರ ಸಾಧನೆ ವಿದ್ವತ್ತಿಗೆ ವೃತ್ತಿಪರತೆಗೆ ಹಿಡಿದ ಕನ್ನಡಿಯಾಗಿವೆ.

’ದೆಹಲಿ ನೋಟ’, ’ಪದಕುಸಿಯೇ ನೆಲವಿಲ್ಲ’ ಉಮಾಪತಿ ಅವರ ಎರಡು ಮಹತ್ವದ ಕೃತಿ ಪ್ರಕಟವಾಗಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular