HomeKarnatakaBIG NEWS: ಆಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿದ ಡಿ.ವಿ.ಸದಾನಂದಗೌಡ

BIG NEWS: ಆಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿದ ಡಿ.ವಿ.ಸದಾನಂದಗೌಡ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕಿತ್ತು ಹಾಕಿ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಮಾತನಾಡಿದ್ದಾರೆ ಎಂಬ ಆಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಸದಾನಂದಗುಡ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ, ಯಾವುದೋ ಒಂದು ಆಡಿಯೋ ಬಂದಿದೆ. ನನ್ನದಲ್ಲದ ಆಡಿಯೋ, ವಿಡಿಯೋಗಳಿಗೆ ನಾನ್ಯಾಕೆ ಪ್ರತಿಕ್ರಿಯಿಸಲಿ? ಈ ಬಗ್ಗೆ ನಾನು ಹೈಕಮಾಂಡ್ ಬಳಿ ಮಾತನಾಡುತ್ತೇನೆ ಎಂದಿದ್ದಾರೆ.

ನಾನು ಯಾವುದೇ ಮಾತುಗಳನ್ನು ಆಡಿಲ್ಲ. ವೈರಲ್ ಆಗಿರುವ ಆಡಿಯೋ ನನ್ನದಲ್ಲ. ಈ ಬಗ್ಗೆ ತನಿಖೆ ನಡೆದು ಸತ್ಯಾಸತ್ಯತೆ ಹೊರಬರಲಿ. ನನ್ನದಲ್ಲದ ವಿಚಾರಕ್ಕೆ ನಾನ್ಯಾಕೆ ಮೈಮೇಲೆ ಎಳೆದುಕೊಳ್ಳಲಿ? ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಕ್ಷದಲ್ಲಿ ನನ್ನ ಬಗ್ಗೆ ಬಹಳ ದಿನಗಳಿಂದಲೂ ಚರ್ಚೆ ನಡೆಯುತ್ತಿದೆ. ಅಡ್ಡಮತದಾನ ಆದಾಗಲೂ ಸದಾನಂದಗೌಡ ಅವರ ಬಗ್ಗೆ ಚರ್ಚೆ ಆಯ್ತು. ಸತ್ಯ ಹೇಳಿದ್ದಕ್ಕೆ ಚರ್ಚೆ ಆಯ್ತು. ಪಕ್ಷದ ಹಿತದೃಷ್ಟಿಯಿಂದ ಕೋರ್ ಕಮಿಟಿಯಲ್ಲಿಯೂ ಮಾತನಾಡಿದ್ದೆ. ಈಗ ನನ್ನದಲ್ಲದ ಆಡಿಯೋ ಬಗ್ಗೆ ನಾನು ಯಾಕೆ ದೂರು ಕೊಡಲಿ? ನಾನು ಯಾವುದಕ್ಕಾಗಿ ಟಾರ್ಗೆಟ್ ಆಗಬೇಕು? 30 ವರ್ಷದ ರಾಜಕೀಯ ಜೀವನದಲ್ಲಿ ನನ್ನಿಂದ ಏನಾದರೂ ವ್ಯತ್ಯಾಸವಾಗಿದ್ದರೆ ಸಾರ್ವಜನಿಕರಲ್ಲಿ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಬದಲವಣೆ ಕುರಿತ ಮಾಜಿ ಸಿಎಂ ಸದಾನಂದಗೌಡ ಕೇಂದ್ರ ನಾಯಕರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜ್ಯ ಬಿಜೆಪಿಯಲ್ಲಿ ಭಾರಿ ಕಂಪನ ಮೂಡಿಸಿದೆ.

ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಬಿಸಾಕಿ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮಾಅತನಾಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದೆ.

ಡಿ.ವಿ.ಸದಾನಂದಗೌಡ ಅವರು ಕೇಂದ್ರದ ನಾಯಕರೊಬ್ಬರಿಒಂದಿಗೆ ಮಾತನಾಡಿದ್ದಾರೆ ಎನ್ನಲಾದ ಈ ಆಡಿಯೋದಲ್ಲಿ ವಿಜಯೇಂದ್ರ ಅವರನ್ನು ಸ್ಥಾನದಿಂದ ಕಿತ್ತಾಕಿ ಎಂದಿದ್ದಾರೆ. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ವರೆಗೂ ಮುಂದುವರೆಯಲು ಬಿಡಿ, ಬಳಿಕ ಅಧ್ಯಕ್ಷ ಸ್ಥಾನದಿಂದ ಕಿತ್ತು ಬಿಸಾಕಿ. ಈಗಲೇ ಕಿತ್ತು ಹಾಕಿದರೆ ಬಿಜೆಪಿ ಮತ್ತೆ ಲಿಂಗಾಯಿತ ವಿರೋಧಿ ಅಂತಾಗುತ್ತೆ. ಹಾಗಾಗಿ ಕಾದು ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕು ಎಂದಿದ್ದಾರೆ. ಈ ಆಡಿಯೋ ಇದೀಗ ರಾಜ್ಯ ಬಿಜೆಪಿಯಲ್ಲಿ ಭೂಕಂಪವನ್ನೇ ಸೃಷ್ಟಿಸಿದೆ.

ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಬಳಿಕ ಬಿಜೆಪಿ ಹಿರಿಯ ನಾಯಕರೇ ಬಿ.ವೈ.ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಹಿರಿಯರನ್ನು ಕಡೆಗಣಿಸುತ್ತಿದ್ದಾರೆ ಎಂದು ಮುರುಗೇಶ್ ನಿರಾಣಿ ಆರೋಪಿಸಿದ್ದರು. ಇದೀಗ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿರುವುದು ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular