HomeKarnatakaರಾಜ್ಯಸಭೆ ಚುನಾವಣೆಗೆ ನಾನೂ ಕೂಡ ಆಕಾಂಕ್ಷಿ ಎಂದ ಮಾಜಿ ಸಿಎಂ ಡಿ.ವಿ.ಸದಾನಂದಗೌಡ

ರಾಜ್ಯಸಭೆ ಚುನಾವಣೆಗೆ ನಾನೂ ಕೂಡ ಆಕಾಂಕ್ಷಿ ಎಂದ ಮಾಜಿ ಸಿಎಂ ಡಿ.ವಿ.ಸದಾನಂದಗೌಡ

ಮೈಸೂರು: ರಾಜ್ಯಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ನಾನೂ ಕೂಡ ರಾಜ್ಯಸಭೆಗೆ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ ಪಕ್ಷದ ವರಿಷ್ಠರಿಗೆ ಈಗಾಗಲೇ ತಿಳಿಸಿದ್ದೇನೆ. ನಾನು ಈಗಾಗಲೇ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗಿದ್ದೇನೆ. ಆದರೆ ಪಕ್ಷ ಯಾವ ಜವಾಬ್ದಾರಿ ಕೊಟ್ಟರೂ ಅದನ್ನು ನಿರ್ವಹಿಸಲು ಸಿದ್ಧನಿದ್ದೇನೆ ಎಂದರು.

ರಾಜ್ಯಸಭೆಗೆ ಹೋಗುವ ಆಸೆ ಇದೆ ಎಂಬುದನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಅಂತಿಮವಾಗಿ ಪಕ್ಷದ ತೀರ್ಮಾನಕ್ಕೆ ನಾನು ಬದ್ಧ ಎಂದು ಹೇಳಿದರು. ಇದೇ ವೇಳೆ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ, ಬದಲಾವಣೆ ಮಾಡುವುದನ್ನು ನಾವು ತೀರ್ಮಾನಿಸುವುದಿಲ್ಲ. ಈ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಆಡಳಿತಕ್ಕೆ ಜನ ಬೇಸತ್ತಿದ್ದಾರೆ. ಈಗ ಚುನಾವಣೆಯಾದರೆ ಕಾಂಗ್ರೆಸ್ 50 ಸೀಟು ಗೆಲ್ಲುವುದು ಕಷ್ಟ. ಸರ್ಕಾರದ ದುರಾಡಳಿತಕ್ಕೆ ಜನರೇ ಉತ್ತರ ಕೊಡಲಿದ್ದಾರೆ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular