HomeKarnatakaBIG NEWS: ಮಾಜಿ ಸಿಎಂ ಡಿ.ವಿ.ಸದಾನಂದಗೌಡಗೆ ಬಿಜೆಪಿ ವರಿಷ್ಠರಿಂದ ಬುಲಾವ್

BIG NEWS: ಮಾಜಿ ಸಿಎಂ ಡಿ.ವಿ.ಸದಾನಂದಗೌಡಗೆ ಬಿಜೆಪಿ ವರಿಷ್ಠರಿಂದ ಬುಲಾವ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ, ವಿಪಕ್ಷ ನಾಯಕನ ಆಯ್ಕೆ ವಿಚಾರ ಭಾರಿ ಚರ್ಚೆಯಲ್ಲಿರುವ ನಡುವೆಯೇ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ವರಿಷ್ಠರ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಡಿ.ವಿ.ಸದಾನಂದಗೌಡ ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲ ದಿನಗಳ ಹಿಂದೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ವಿಪಕ್ಷ ನಾಯಕನ ಸ್ಥಾನದ ವಿಚಾರವಾಗಿ ಬಹಿರಂಗವಾಗಿ ಮಾತನಾಡಿದ್ದರು. ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗುತ್ತಿರುವುದಕ್ಕೆ ಅಸಮಾಧಾನವನ್ನೂ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಜೆ.ಪಿ.ನಡ್ಡಾ, ಸದಾನಂದಗೌಡ ಜೊತೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಲ್ಲದೇ ತಮಿಳುನಾಡಿನಲ್ಲಿ ಬಿಜೆಪಿ ಹಾಗೂ ಡಿಎಂಕೆ ಗಲಾಟೆ ಹಿನ್ನೆಲೆಯಲ್ಲಿ ಸದಾನಂದಗೌಡ ನೇತೃತ್ವದಲ್ಲಿ ನಾಲ್ವರ ಸಮಿತಿ ರಚಿಸಲಾಗಿದೆ. ಈ ನಿಟ್ಟಿನಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದ್ದು, ನಡ್ಡಾ ಭೇಟಿ ಬಳಿಕ ತಮಿಳುನಾಡಿಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular