HomeKarnatakaBIG NEWS: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ...

BIG NEWS: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಲಾಭಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಹೈಕಮಾಂಡ್ ಸಿದ್ಧತೆ ನಡೆಸಿದ್ದು, ಟಿಕೆಟ್ ಆಕಾಂಕ್ಷಿಗಳು ಭಾರಿ ಲಾಭಿ ನಡೆಸಿದ್ದಾರೆ.

ಬಿಜೆಪಿ ಎರಡನೇ ಪಟ್ಟಿಯಲ್ಲಿ ಕರ್ನಾಟಕ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಬಿಜೆಪಿ ವರಿಷ್ಠರು ರಾಜ್ಯ ನಾಯಕರೊಂದಿಗೆ ಸರಣಿ ಸಭೆ ನಡೆಸಿದ್ದಾರೆ. ಈ ನಡುವೆ ಕೆಲ ಕ್ಷೇತ್ರಗಳ ಟಿಕೆಟ್ ಗಾಗಿ ಹಿರಿಯ ನಾಯಕರು ಪಟ್ಟು ಹಿಡಿದಿದ್ದಾರೆ. ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಲಾಭಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ವಿ.ಸದಾನಂದಗೌಡ, ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಈ ಹಿಂದೆ ಬೇರೆಯವರಿಗೆ ಟಿಕೆಟ್ ಕೊಡಿ ಎಂದು ಹೇಳಿದ್ದೆ. ಕ್ಷೇತ್ರದ ಎಲ್ಲಾ ಶಾಸಕರು, ಮುಖಂಡರು ನೀವೇ ಸ್ಪರ್ಧಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇನ್ನೂ ನಾನು ಹತ್ತು ವರ್ಷ ರಾಜಕೀಯದಲ್ಲಿರಬಹುದು ಎಂದಿದ್ದಾರೆ. ಒಂದು ವೇಳೆ ನನಗೆ ಟಿಕೆಟ್ ಕೊಡದಿದ್ದರೆ ಸ್ವಲ್ಪ ನೋವಾಗುತ್ತದೆ ಎಂದು ಡಿವಿಎಸ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular