ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲವಣೆ ಕುರಿತ ಮಾಜಿ ಮುಖ್ಯಮಂತ್ರಿಯೊಬ್ಬರು ಬಿಜೆಪಿ ಹೈಕಮಾಂಡ್ ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜ್ಯ ಬಿಜೆಪಿಯಲ್ಲಿ ಭಾರಿ ಕಂಪನ ಮೂಡಿಸಿದೆ.
ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಬಿಸಾಕಿ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದೆ.
ಡಿ.ವಿ.ಸದಾನಂದಗೌಡ ಅವರು ಕೇಂದ್ರದ ನಾಯಕರೊಬ್ಬರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಈ ಆಡಿಯೋದಲ್ಲಿ ವಿಜಯೇಂದ್ರ ಅವರನ್ನು ಸ್ಥಾನದಿಂದ ಕಿತ್ತಾಕಿ ಎಂದಿದ್ದಾರೆ. ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ವರೆಗೂ ಮುಂದುವರೆಯಲು ಬಿಡಿ, ಬಳಿಕ ಅಧ್ಯಕ್ಷ ಸ್ಥಾನದಿಂದ ಕಿತ್ತು ಬಿಸಾಕಿ. ಈಗಲೇ ಕಿತ್ತು ಹಾಕಿದರೆ ಬಿಜೆಪಿ ಮತ್ತೆ ಲಿಂಗಾಯಿತ ವಿರೋಧಿ ಅಂತಾಗುತ್ತೆ. ಹಾಗಾಗಿ ಕಾದು ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕು ಎಂದಿದ್ದಾರೆ. ಈ ಆಡಿಯೋ ಇದೀಗ ರಾಜ್ಯ ಬಿಜೆಪಿಯಲ್ಲಿ ಭೂಕಂಪವನ್ನೇ ಸೃಷ್ಟಿಸಿದೆ.
ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಬಳಿಕ ಬಿಜೆಪಿ ಹಿರಿಯ ನಾಯಕರೇ ಬಿ.ವೈ.ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಹಿರಿಯತ್ರನ್ನು ಕಡೆಗಣಿಸುತ್ತಿದ್ದಾರೆ ಎಂದು ಮುರುಗೇಶ್ ನಿರಾಣಿ ಆರೋಪಿಸಿದ್ದರು. ಇದೀಗ ಮಾಜಿ ಸಿಎಂ ಡಿ.ವಿ.ಸದಾಅನಂದಗೌಡ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿರುವುದು ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದೆ.

