HomeKarnatakaದಸರಾ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ : ಡಿಎ ಹೆಚ್ಚಳ ಮಾಡಿ ಸರ್ಕಾರ ಆದೇಶ

ದಸರಾ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ : ಡಿಎ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡ 3.75 ರಷ್ಟು ಹೆಚ್ಚಳ ಮಾಡಲಾಗಿದೆ. ಈ ಹೆಚ್ಚಳದೊಂದಿಗೆ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇಕಡ 38.75ಕ್ಕೆ ಏರಿಕೆಯಾಗಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 1109 ಕೋಟಿ ರೂ. ಹೆಚ್ಚುವರಿ ಹೊರೆಯಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಡಿಎ ಹೆಚ್ಚಳದ ಪ್ರಯೋಜನ ಸಿಗಲಿದೆ. ಯುಜಿಸಿ, ಎಐಸಿಟಿಇ ಶ್ರೇಣಿಗಳ ಬೋಧಕ ಸಿಬ್ಬಂದಿಗೆ ಶೇಕಡ 4ರಷ್ಟು ಡಿಎ ಹೆಚ್ಚಳ ಮಾಡಲಾಗಿದೆ.

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಶೇ 3.75 ರಷ್ಟು ಹೆಚ್ಚಿಸಿ ಹಾಗೂ UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ. 4 ಹೆಚ್ಚಿಸಿ ಅಂದರೆ ಶೇ 46ಕ್ಕೆ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ ರೂ.1,109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ. ನಮ್ಮ ಈ ಆದೇಶವು ರಾಜ್ಯ ಸರ್ಕಾರಿ ನೌಕರರ ದಸರಾ ಸಂಭ್ರಮವನ್ನು ಇಮ್ಮಡಿಗೊಳಿಸಲಿದೆ ಎಂದು ಭಾವಿಸಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular