BIG NEWS: ಲಿಡ್ಕರ್ ಬ್ರ್ಯಾಂಡ್ ರಾಯಭಾರಿಯಾಗಿ ಡಾಲಿ ಧನಂಜಯ್ ನೇಮಕ

ಬೆಂಗಳೂರು: ಲಿಡ್ಕರ್ ಉತ್ಪನ್ನಗಳಿಗೆ ಖ್ಯಾತ ನಟ ಡಾಲಿ ಧನಂಜಯ್ ಪ್ರದರ್ಶನ ರಾಯಭಾರಿ ನೇಮಕಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಲಿಡ್ಕರ್ ಉತ್ಪನ್ನಗಳಿಗೆ ಡಾಲಿ ಧನಂಜಯ್ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿದ್ದು, ಉಚಿತವಾಗಿ ಈ ಕೆಲಸ ಮಾಡುತ್ತಿದ್ದಾರೆ. ಅವರೊಬ್ಬ ಉದಯೋನ್ಮುಖ ನಟ ಹಾಗೂ ಸಾಮಾಜಿಕ ಕಳಕಳಿ ಉಳ್ಳವರು. ಅವರನ್ನು ರಾಯಭಾರಿಯಾಗಿ ಮಾಡಿರುವುದು ಅರ್ಥಪೂರ್ಣ ವಾಗಿದೆ ಎಂದರು.

ಇದರಿಂದ ಲಿಡ್ಕರ್ ಉತ್ಪನ್ನಗಳು ಹೆಚ್ಚಾಗಿ ಮಾರಾಟವಾಗುವುದಲ್ಲದೆ ಚರ್ಮ ಉದ್ಯಮಕ್ಕೆ ಉತ್ತೇಜನ ದೊರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಟ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಡಾಲಿ ಧನಂಜಯ್ ಅವರಿಗೆ ಈಗ ಮತ್ತೊಂದು ಹೊಸ ಜವಾಬ್ದಾರಿ ಸಿಕ್ಕಿದಂತಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read