HomeEntertainmentಬಾಲಕೃಷ್ಣ ಅಭಿನಯದ 'ದಾದಾ' ಚಿತ್ರದ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿ!

ಬಾಲಕೃಷ್ಣ ಅಭಿನಯದ ‘ದಾದಾ’ ಚಿತ್ರದ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿ!

ನಂದಮೂರಿ ಬಾಲಕೃಷ್ಣ ಅಭಿನಯದ ಮುಂಬರುವ ಬಿಗ್ ಬಜೆಟ್ ಕಮರ್ಷಿಯಲ್ ಸಿನಿಮಾ ‘ದಾದಾ’ ಸಿನಿರಂಗದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದ್ದು, ಡಿಸೆಂಬರ್ 24, 2026ರಂದು ಸಿನಿಮಾ ತೆರೆಗೆ ಬರಲಿದೆ ಎಂದು ಚಿತ್ರತಂಡ ಈಗಾಗಲೇ ಅಧಿಕೃತವಾಗಿ ಘೋಷಿಸಿದೆ. ಇದೀಗ ಚಿತ್ರದ ಪ್ರಚಾರ ಕಾರ್ಯಗಳಿಗೆ ಅಧಿಕೃತ ಚಾಲನೆ ಸಿಕ್ಕಿದ್ದು, ಚಿತ್ರದ ಮೊದಲ ಹಾಡಿನ ಬಿಡುಗಡೆ ದಿನಾಂಕ ಹೊರಬಿದ್ದಿದೆ.

ಚಿತ್ರದ ಬಹುನಿರೀಕ್ಷಿತ ಮೊದಲ ಹಾರಾದ ”ದಾದಾ ಧಮಾಕಾ’ ನವೆಂಬರ್ 13, 2026ರಂದು ಅದ್ಧೂರಿಯಾಗಿ ಬಿಡುಗಡೆಗೊಳ್ಳಲಿದೆ. ಟಾಲಿವುಡ್ ನುರಿತ ಸಂಗೀತ ನಿರ್ದೇಶಕ ಎಸ್.ಎಸ್. ಥಮನ್ ಅವರು ಈ ಹಾಡಿಗೆ ಭರ್ಜರಿ ಸಂಗೀತ ಸಂಯೋಜನೆ ನೀಡಿದ್ದಾರೆ. ವಿಶೇಷವೆಂದರೆ, ಈ ಮಾಸ್ ಹಾಗೂ ಮನರಂಜನಾತ್ಮಕ ಹಾಡಿನಲ್ಲಿ ಬಾಲಿವುಡ್ ನಟಿ ನರ್ಗೀಸ್ ಫಕ್ರಿ ಹೆಜ್ಜೆ ಹಾಕಲಿದ್ದು, ಇದು ಚಿತ್ರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಲಿದೆ.

ಈ ಸಿನಿಮಾದಲ್ಲಿ ಕಾಜಲ್ ಅಗರ್ವಾಲ್, ಸಮುದ್ರಖನಿ ಸೇರಿದಂತೆ ಹಲವು ದಿಗ್ಗಜ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವೆಂಕಟ ಸತೀಶ್ ಕಿಲಾರು ಅವರ ಒಡೆತನದ ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಈ ಬೃಹತ್ ಚಿತ್ರ ನಿರ್ಮಾಣವಾಗುತ್ತಿದ್ದು, ಸಿನಿಮಾ ಬಿಡುಗಡೆಯವರೆಗೂ ಒಂದರ ಹಿಂದೆ ಒಂದರಂತೆ ಪ್ರಚಾರದ ಅಪ್ಡೇಟ್ ಗಳನ್ನು ನೀಡಲು ಚಿತ್ರತಂಡ ಸಿದ್ಧತೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular