ನಗರ ಜೀವನ ಅಂದುಕೊಂಡಷ್ಟು ಸುಲಭವಿಲ್ಲ. ಒತ್ತಡ, ಕೌಟುಂಬಿಕ ಹಿಂಸೆ, ಆರ್ಥಿಕ ಸವಾಲುಗಳು ಮುಂತಾದ ಹಲವು ಕಾರಣಕ್ಕೆ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ನಡೆಯುವ ಆತ್ಮಹತ್ಯೆ ಪ್ರಕರಣಗಳ ಅಂಕಿ ಅಂಶ ಬೆಚ್ಚಿ ಬೀಳಿಸುವಂತಿದೆ.
ಕರ್ನಾಟಕದ ಗೃಹ ಇಲಾಖೆ ಮಾಹಿತಿ ಪ್ರಕಾರ ಬೆಂಗಳೂರು ನಗರದಲ್ಲಿ 3.5 ಗಂಟೆಗೆ ಒಂದು ಆತ್ಮಹತ್ಯೆ ನಡೆಯುತ್ತಿದೆ. ಬೆಂಗಳೂರು ನಗರದಲ್ಲಿ ಪ್ರತಿನಿತ್ಯ 7 ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.
ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆಯೇ ಹೆಚ್ಚಾಗಿದೆ. ಬೆಂಗಳೂರು ನಗರದಲ್ಲಿ ಕಳೆದ 4 ವರ್ಷಗಳಲ್ಲಿ ದಾಖಲಾದ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ 9,450 ಆಗಿದೆ. ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೇ ಪರಿಹಾರವಲ್ಲ.
ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669
ಬೆಂಗಳೂರು ನಗರದ ಆತ್ಮಹತ್ಯೆ ಪ್ರಕರಣಗಳು: ಗೃಹ ಇಲಾಖೆ ವರದಿಯಂತೆ ಬೆಂಗಳೂರು ನಗರದಲ್ಲಿ 2022ರಲ್ಲಿ 2370, 2023ರಲ್ಲಿ 2313, 2024ರಲ್ಲಿ 2403 ಮತ್ತು 2025ರಲ್ಲಿ 2300 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ.
ಒಟ್ಟು ಪ್ರಕರಣಗಳಲ್ಲಿ ಶೇ 86ರಷ್ಟು ಜನರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ ಸೇವನೆ, ಕಟ್ಟಡದ ಮೇಲಿನಿಂದ ಜಿಗಿಯುವುದು, ರೈಲುಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಸಹ ಸೇರಿವೆ.
ನಗರದಲ್ಲಿನ ಒತ್ತಡದ ಪರಿಸ್ಥಿತಿ ಇದೆ. ಕೆಲವು ದಿನಗಳ ಹಿಂದೆ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಇಡೀ ನಗರವನ್ನು ಬೆಚ್ಚಿ ಬೀಳಿಸಿತ್ತು. ನಿಮ್ಹಾನ್ಸ್ ವತಿಯಿಂದ ಟೆಲಿ-ಮನಸ್ ಸಹಾಯವಾಣಿಯನ್ನು ಆರಂಭಿಸಲಾಗಿದೆ.
ಒತ್ತಡದಿಂದ ಬಳಲುತ್ತಿರುವವರು ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳಬಹುದು. ನಿಮ್ಹಾನ್ಸ್ ಸಹಾಯವಾಣಿ ಸಂಖ್ಯೆಗಳು 14416/1800-891-4416 ಆಗಿದೆ. ಕೋವಿಡ್ ಪರಿಸ್ಥಿತಿ ಬಳಿಕ ಟೆಲಿ-ಮನಸ್ ಸಹಾಯವಾಣಿಗೆ ಬರುವ ಕರೆಗಳ ಸಂಖ್ಯೆ ಸಹ ಹೆಚ್ಚಾಗಿದೆ ಎಂಬ ಮಾಹಿತಿಯೂ ಇದೆ.
ಬೆಂಗಳೂರು ನಗರದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಗೃಹ ಇಲಾಖೆಯ ಮಾಹಿತಿ ಪ್ರಕಾರ ನಗರದಲ್ಲಿ ನಗರದಲ್ಲಿ ಪ್ರತಿದಿನ 6-7 ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.
ತಜ್ಞರ ಅಭಿಪ್ರಾಯದ ಪ್ರಕಾರ ಅತಿಯಾದ ಒತ್ತಡವೇ ಆತ್ಮಹತ್ಯೆಗೆ ದಾರಿ ಮಾಡಿಕೊಡುತ್ತಿದೆ. ಮಾನಸಿಕ ಆರೋಗ್ಯ ಸಮಸ್ಯೆ, ಒಂಟಿತನ, ಕುಟುಂಬ ಕಲಹಗಳು, ಆರ್ಥಿಕ ಸಂಕಷ್ಟ, ಹೊಂದಾಣಿಕೆ ಕೊರತೆ ಆತ್ಮಹತ್ಯೆಗೆ ಪ್ರಮುಖ ಕಾರಣವಾಗಿದೆ.
ನಿಮ್ಹಾನ್ಸ್ ಮಾಹಿತಿಯಂತೆ ಆತ್ಮಹತ್ಯೆಗೆ ಶರಣಾಗುವ ಸುಮಾರು 3-1 ಜನರಿಗೆ ಮಾನಸಿಕ ಅಸ್ವಸ್ಥತೆ ಹಿನ್ನಲೆ ಇದೆ. ಉಳಿದವರು ಆರ್ಥಿಕ ಸಮಸ್ಯೆ, ಸಂಬಂಧಗಳ ನಡುವೆ ಬಿರುಕು, ಭಾವನಾತ್ಮಕ ಒತ್ತಡದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.
ನಿಮ್ಹಾನ್ಸ್ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಶ್ರೇಷ್ಠತೆಯನ್ನು ಸಾಧಿಸಿರುವ ಸಂಸ್ಥೆ. ಇದು ಬೆಂಗಳೂರು ನಗರದಲ್ಲಿರುವುದು ಅತ್ಯಂತ ಹೆಮ್ಮೆಯ ವಿಷಯ. ರಾಜ್ಯದಾದ್ಯಂತ ಮಾನಸಿಕ ಆರೋಗ್ಯ ಸೇವೆಯನ್ನು ಕಲ್ಪಿಸಲು ಕರ್ನಾಟಕ ಸರ್ಕಾರ ನಿಮ್ಹಾನ್ಸ್ ನೊಂದಿಗೆ ಜೊತೆಗೂಡಿ ಕಾರ್ಯನಿರ್ವಹಿಸುತ್ತಿದೆ.
ನಿಮ್ಹಾನ್ಸ್‌ನೊಂದಿಗಿನ ಜಂಟಿ ಸಹಭಾಗಿತ್ವದ ಮೂಲಕ ರಾಜ್ಯದ ಪ್ರತಿಯೊಬ್ಬರಿಗೂ ಮಾನಸಿಕ ಆರೋಗ್ಯ ಸೇವೆಯನ್ನು ಖಾತ್ರಿಪಡಿಸಲು ಸಾಧ್ಯವಾಗಿದೆ. ಸರ್ಕಾರ ಮಾನಸಿಕ ಆರೋಗ್ಯ ಸೇವೆಯನ್ನು ಒದಗಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ.
ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಆತ್ಮಹತ್ಯೆ ತಡೆ, ದುಶ್ಚಟ ಹೊಂದಿದವರ ಪುನರ್ವಸತಿ ಮತ್ತು ಸಮುದಾಯ ಮಾನಸಿಕ ಆರೋಗ್ಯ ಕಾರ್ಯಕ್ರಮಗಳಿಗೆ ಒತ್ತು ನೀಡಿದೆ. ಟೆಲಿ-ಮಾನಸ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದ್ದು, ರಾಜ್ಯದಲ್ಲಿ ಮಾನಸಿಕ ಆರೋಗ್ಯದ ಬೆಂಬಲ ಅಗತ್ಯವಿರುವ ಸುಮಾರು 17 ಲಕ್ಷ ಜನರು ಇದರ ಪ್ರಯೋಜನ ಪಡೆದಿದ್ದಾರೆ.

