HomeLatest NewsBREAKING : ಅಬ್ದುಲ್ ರಹೀಂ ಹತ್ಯೆ ಕೇಸ್ : ಕಾಂಗ್ರೆಸ್ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ...

BREAKING : ಅಬ್ದುಲ್ ರಹೀಂ ಹತ್ಯೆ ಕೇಸ್ : ಕಾಂಗ್ರೆಸ್ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ ದಕ್ಷಿಣ ಕನ್ನಡ ಮುಸ್ಲಿಂ ಮುಖಂಡರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಅಬ್ದುಲ್ ರಹೀಂ ಹತ್ಯೆ ಪ್ರಕರಣದ ಬೆನ್ನಲ್ಲೇ ಕಾಂಗ್ರೆಸ್ ಮುಖಂಡರು ವಿವಿಧ ಪೋಸ್ಟ್ ಗಳಿಗೆ ಸಾಮೂಹಿಕ ರಾಜೀನಾಮೆ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸಾಚಾರ ತಡೆಯುವಲ್ಲಿ ರಾಜ್ಯ ಕಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಗಳ ವಿವಿಧ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಸಮುದಾಯದಲ್ಲಿ ಆಕ್ರೋಶ ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲ ಕಂಗ್ರೆಸ್ ಉಪಾಧ್ಯಕ್ಷ ಕೆ.ಅಶ್ರಫ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ರಫ್, ಇಂದು ಮಧ್ಯಹ್ನ ಮಂಗಳೂರಿನಲ್ಲಿ ನಮ್ಮ ಮುಖಂಡರ ಸಭೆ ನಡೆಯಲಿದ್ದು, ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಗೃಹ ಇಲಾಖೆ ಸಂಪೂರ್ಣ ವಿಫಲಾವಾಗಿದೆ. ನಮಗೆ ನ್ಯಾಯ ಸಿಗುವವರೆಗೂ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ನಾವು ಭಾಗಿಯಾಗಲ್ಲ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಟ್ವಾಳದಲ್ಲಿ ಅಬ್ದುಲ್ ರಹಿಂ ಹತ್ಯೆ ಬಳಿಕ ಮುಸ್ಲಿಂ ಮುಖಂಡರು ಕಾಂಗ್ರೆಸ್ ನಾಯಕರ ವಿರುದ್ಧ ಸಿಡಿದೆದ್ದಿದ್ದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಪರ್ಯಾಯ ಪಕ್ಷ ಕಟ್ಟುವ ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular