HomeKarnatakaBIG NEWS: ಪ್ರೇಯಸಿ ಮನೆ ಬಳಿ ಬಂದ ಯುವಕನನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ

BIG NEWS: ಪ್ರೇಯಸಿ ಮನೆ ಬಳಿ ಬಂದ ಯುವಕನನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ

ಮಂಗಳೂರು: ಪ್ರೇಯಸಿ ಮನೆ ಬಳಿ ಬಂದಿದ್ದ ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಅಮಾನವೀಯವಾಗಿ ಥಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದಲ್ಲಿ ನಡೆದಿದೆ.

ಬೆಂಗೆರೆ ನಿವಾಸಿ ಮೊಹಮ್ಮದ್ ಮಸ್ತಫಾ ಮೇಲೆ ಹಲ್ಲೆ ನಡೆಸಲಾಗಿದ್ದು, ಪೊಲೀಸ್ ಠಾಣೆಯಲ್ಲಿ ಯುವಕ ದೂರು ನೀಡಿದ್ದಾರೆ.

ಎರಡು ದಿನಗಳ ಹಿಂದೆ ಯುವಕ ತನ್ನ ಪ್ರೇಯಸಿ ಮನೆ ಬಳಿ ಬಂದಿದ್ದ ಎನ್ನಲಾಗಿದೆ. ಈ ವೇಳೆ ಯುವತಿಯ ಕುಟುಂಬದವರು ಆತನನ್ನು ಹಿಡಿದು ಥಳಿಸಿ ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಂಭೀರವಾಗಿ ಹಲ್ಲೆಗೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಬಳಿಕ ಈಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಯುವಕನಿಗೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾನಗಳಲ್ಲಿ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular