ಮಂಗಳೂರು: ಬಪ್ಪನಾಡು ದುರ್ಗಾಪರಮೇಶ್ವರಿ ರಥೋತ್ಸವದ ವೇಳೆ ಅವಘಡ ಸಂಭವಿಸಿದ್ದು, ಏಕಾಏಕಿ ತೇರು ಕುಸಿದು ಬಿದ್ದ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪ್ರಸಿದ್ಧ ಬಪ್ಪನಾಡು ದುರ್ಗಾಪರಮೇಶ್ವರಿ ರಥೋತ್ಸವ ನಡೆದಿದ್ದು, ಮಧ್ಯರಾತ್ರಿ 1:40ರ ಸುಮಾರಿಗೆ ಅದ್ದೂರಿಯಾಗಿ ರಥೋತ್ಸವ ನಡೆಸುತ್ತಿದ್ದ ವೇಳೆ ಏಕಾಏಕಿ ತೇರು ಕುಸಿತಗೊಂಡಿದೆ.
ಅದೃಷ್ಟವಶಾತ್ ತೇರು ಎಳೆಯುತ್ತಿದ್ದ ಭಕ್ತರು ಅಪಾಯದಿಂದ ಪಾರಾಗಿದ್ದಾರೆ. ಯಾವುದೇ ಅನಾಹುತ ಸಂಭವಿಸಿಲ್ಲ. ತೇರು ಕುಸಿದು ಬೀಳುತ್ತಿದ್ದ ದೃಶ್ಯ ವ್ಯಕ್ತಿಯೊಬ್ಬರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.