HomeKarnatakaBIG NEWS: ಕುಸಿದುಬಿದ್ದ ನಿರ್ಮಾಣ ಹಂತದ ಸೇತುವೆ; 7 ಜರಿಗೆ ಗಾಯ

BIG NEWS: ಕುಸಿದುಬಿದ್ದ ನಿರ್ಮಾಣ ಹಂತದ ಸೇತುವೆ; 7 ಜರಿಗೆ ಗಾಯ

ಮಂಗಳೂರು: ನಿರ್ಮಾಣ ಹಂತದ ಸೇತುವೆ ಏಕಾಏಕಿ ಕುಸಿದು ಬಿದ್ದು 7 ಜನರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿಯಲ್ಲಿ ನಡೆದಿದೆ.

ಬರೆಂಜ-ಕುರುಡಕಟ್ಟೆ ನಡುವೆ ಸಂಪರ್ಕ ಕಲ್ಪಿಸುತ್ತಿದ್ದ ಮಲ್ಲಿಪ್ಪಾಡಿಯ ನಿರ್ಮಾಣ ಹಂತದ ಸೇತುವೆ ಇದಾಗಿದ್ದು, ಕೊನೆಯ ಹಂತದ ಕ್ರಾಂಕ್ರಿಟ್ ಮಿಕ್ಸ್ ಹಾಕುತ್ತಿದ್ದಾಗ ಸೇತುವೆ ಕುಸಿದು ಬಿದ್ದಿದೆ. 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಳಭಾಗದಲ್ಲಿ ಹಾಕಲಾಗಿದ್ದ ರಾಡ್ ಜಾರಿದ ಪರಿಣಾಮ ಸೇತುವೆ ಮೇಲೆ ಹಾಕಲಾಗಿದ್ದ ಕಾಂಕ್ರಿಟ್ ಸ್ಲ್ಯಾಬ್ ಕುಸಿದು ಬಿದ್ದಿದೆ. ಓರ್ವ ಕಾರ್ಮಿಕ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular