ಮಂಗಳೂರು: ಕರಾವಳಿ ಜಿಲ್ಲೆಯಾದ್ಯಂತ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಅದರಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
ಮಳೆ ಅವಾಂತರದಿಂದಾಗಿ ವಿದ್ಯಾರ್ಥಿಗಳು ಅಂಗನವಾಡಿ ಕೇಂದ್ರಗಳಿಗೆ, ಕಾಲೇಜುಗಳಿಗೆ ಹೋಗುವುದೂ ದುಸ್ತರವಾಗಿದೆ. ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮೇ 27 ಹಾಗೂ 28ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುರುಗನ್ ಆದೇಶ ಹೊರಡಿಸಿದ್ದಾರೆ.
ಮೈಸೂರು ಜಿಲ್ಲೆಯಲ್ಲಿಯೂ ಒಂದೇ ಸಮನೇ ಮಳೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಇಂದು ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀ ಕಾಂತ್ ರೆಡ್ಡಿ ಆದೇಶಿಸಿದ್ದಾರೆ.