HomeKarnatakaBREAKING: ಮನೆ ಗೋಡೆ ಕುಸಿದುಬಿದ್ದು ನಾಲ್ವರು ಸ್ಥಳದಲ್ಲೇ ದುರ್ಮರಣ

BREAKING: ಮನೆ ಗೋಡೆ ಕುಸಿದುಬಿದ್ದು ನಾಲ್ವರು ಸ್ಥಳದಲ್ಲೇ ದುರ್ಮರಣ

ಮಂಗಳೂರು:
ಧಾರಾಕಾರವಾಗಿ ಸುರುದ ಮಳೆಗೆ ಮನೆ ಗೋಡೆ ಕುಸಿದು ಬಿದ್ದು ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.

ಉಳ್ಳಾಲ ತಾಲೂಕಿನ ಕುತ್ತಾರು ಮದನಿ ಎಂಬಲ್ಲಿ ಈ ಘಟನೆ ನಡೆದಿದೆ. ಅಬೂಬಕ್ಕರ್ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಮನೆಯ ಗೋಡೆ ಏಕಾಏಕಿ ಕುಸಿದು ಬಿದ್ದು ಈ ದುರಂತ ಸಂಭವಿಸಿದೆ.

ಯಾಸಿರ್, ಮರಿಯಮ್ಮ, ರಿಯಾನ ಹಾಗೂ ರಿಫಾನ ಮೃತ ದುರ್ದೈವಿಗಳು. ಯಾಸಿರ್ ಮನೆ ಮೇಲೆ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು ಅವಘಡ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಮೂವರ ಮೃತ ದೇಹಗಳನ್ನು ಹೊರತೆಗೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕಿ ರಿಫಾನಾ ಮೃತ ದೇಹ ಪತ್ತೆಯಾಗಿಲ್ಲ. ಅವಶೇಷಗಳಡಿ ಸಿಲುಕಿದ್ದು, ಕಾರ್ಯಾಚರಣೆ ಮುಂದುವರೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular