HomeLatest NewsBREAKING: ಮನೆ ಮೇಲೆ ಗುಡ್ದ ಕುಸಿತ ಪ್ರಕರಣ: ಕಾರ್ಯಾಚರಣೆಯಲ್ಲಿ ಅವಶೇಷಗಳಡಿ ಸಿಲುಕಿದ್ದ ಮಗು ಆರುಷ್ ರಕ್ಷಣೆ

BREAKING: ಮನೆ ಮೇಲೆ ಗುಡ್ದ ಕುಸಿತ ಪ್ರಕರಣ: ಕಾರ್ಯಾಚರಣೆಯಲ್ಲಿ ಅವಶೇಷಗಳಡಿ ಸಿಲುಕಿದ್ದ ಮಗು ಆರುಷ್ ರಕ್ಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಮನೆ ಮೇಲೆ ಗುಡ್ದ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮಗು ಆರುಷ್ ನನ್ನು ರಕ್ಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಕಾಂತಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಗುಡ್ಡ ಕುಸಿದು ಬಿದ್ದು, ಐದು ಜನರು ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ಕಾಂತಪ್ಪ ಪೂಜಾರಿ ಅವಶೇಷಗಳಡಿಯಿಂದ ಹೊರಬಂದು ಬಚಾವಾಗ್ ಆಗಿದ್ದರು. ಮಣ್ಣಿನಡಿ ಸಿಲುಕಿದ್ದ ಪ್ರೇಮಾ ಪೂಜಾರಿ (58) ಹಾಗೂ ಮಗು ಆರ್ಯನ್ ಇಬ್ಬರು ಸಾವನ್ನಪ್ಪಿದ್ದಾರೆ. ಮಹಿಳೆ ಅಶ್ವಿನಿ ಹಾಗೂ ಅವರ ಮಗು ಅವಶೇಷಗಳಡಿಯಲ್ಲಿ ಸಿಲುಕಿ ಹೊರಬರಲಾಗದೇ ಪರದಾಟ ನಡೆಸಿದ್ದರು. ಅವರ ರಕ್ಷಣೆಗಾಗಿ ಬೆಳಿಗ್ಗೆಯಿಂದ ನಡೆಯುತ್ತಿದ್ದು, ಸತತ 9 ಗಂಟೆಗಳ ಕಾರ್ಯಾಚರಣೆ ಬಳಿಕ ಮಗು ಆರುಷ್ ನನ್ನು ರಕ್ಷಿಸಲಾಗಿದೆ. ಎಸ್ ಡಿ ಆರ್ ಎಫ್ ಹಾಗೂ ಎನ್ ಡಿ ಆರ್ ಎಫ್ ಸಿಬ್ಬಂದಿ ಸುರಕ್ಷಿತವಾಗಿ ಮಗುವನ್ನು ಹೊರತೆಗಿದ್ದಾರೆ.

ಆದರೆ ಮಹಿಳೆ ಅಶ್ವಿನಿ ಅವರ ರಕ್ಷಣೆಗಾಗಿ ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ತಂಡ ಹರಸಾಹಸ ಪಡುತ್ತಿದ್ದು, ಮಳೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular