HomeLatest NewsBREAKING: ಮನೆ ಮೇಲೆ ಗುಡ್ಡ ಕುಸಿದು ದುರಂತ ಪ್ರಕರಣ: ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು; ಇಬ್ಬರ...

BREAKING: ಮನೆ ಮೇಲೆ ಗುಡ್ಡ ಕುಸಿದು ದುರಂತ ಪ್ರಕರಣ: ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು; ಇಬ್ಬರ ರಕ್ಷಣೆ

ಮಂಗಳೂರು: ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಮೇಲೆ ಗುಡ್ಡ ಕುಸಿದು, ಒಂದೇ ಕುಟುಂಬದ ಐವರು ಅವಶೇಷಗಳಡಿ ಸಿಲುಕಿಕೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಈ ದುಂರತ ಸಂಭವಿಸಿದೆ. ಕಾಂತಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಪರಿಣಾಮ ಅವಶೇಷಗಳಡಿ ಐವರು ಸಿಲುಕಿದ್ದಾರೆ. ಓರ್ವ ವ್ಯಕ್ತಿ ಅವಶೇಷಗಳಡಿಯಿಂದ ಹೊರಬಂದು ಬಚಾವಾಗಿದ್ದಾರೆ. ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ತಾಯಿ ಹಾಗೂ ಇಬ್ಬರು ಪುಟ್ಟ ಮಕ್ಕಳು ಮಣ್ಣಿನಡಿ ಸಿಲುಕಿದ್ದು, ಹೊರಬರಲಾಗದೇ ಪರದಾಡುತ್ತಿದ್ದು, ರಕ್ಷಣೆಗಾಗಿ ಸ್ಥಳೀಯರು, ಎಸ್ ಡಿ ಆರ್ ಎಫ್ ತಂಡ ಹರಸಾಹಸ ಪಡುತ್ತಿದೆ.

ಸದ್ಯದ ಮಾಹಿತಿ ಪ್ರಕಾರ ಮಣ್ಣಿನಡಿ ಸಿಲುಕಿದ್ದ ಮಹಿಳೆ ಪ್ರೇಮಾ ಪೂಜಾರಿ ಸಾವನ್ನಪ್ಪಿದ್ದಾರೆ. ಇಬ್ಬರನ್ನು ರಕ್ಷಿಸಲಾಗಿದೆ. ಎಸ್ ಡಿ ಆರ್ ಎಫ್ ಹಾಗೂ ಎನ್ ಡಿ ಆರ್ ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular