HomeKarnatakaBREAKING NEWS: ಮಗುವಿನ ಜೊತೆ ನದಿಗೆ ಹಾರಿ ತಂದೆ ಆತ್ಮಹತ್ಯೆ ಯತ್ನ: ಇಬ್ಬರನ್ನು ರಕ್ಷಿಸಿದ ಸ್ಥಳೀಯರು

BREAKING NEWS: ಮಗುವಿನ ಜೊತೆ ನದಿಗೆ ಹಾರಿ ತಂದೆ ಆತ್ಮಹತ್ಯೆ ಯತ್ನ: ಇಬ್ಬರನ್ನು ರಕ್ಷಿಸಿದ ಸ್ಥಳೀಯರು

ಮಂಗಳೂರು: ಮಗುವಿನ ಜೊತೆ ನದಿಗೆ ಹಾರಿ ತಂದೆಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರು ಇಬ್ಬರನ್ನೂ ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಮಂಗಳೂರು ಹೊರವಲಯದ ಗುರುಪುರದಲ್ಲಿ ಈ ಘಟನೆ ನಡೆದಿದೆ. ತಂದೆಯೊಬ್ಬ ತನ್ನ ಎರಡು ವರ್ಷದ ಮಗುವಿನ ಜೊತೆ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸೇತುವೆ ಮೇಲೆ ನಿಂತು ಇನ್ನೇನು ನದಿಗೆ ಹಾರಬೇಕು ಎನ್ನುವಷ್ಟರಲ್ಲಿ ಸ್ಥಳೀಯರು ದೌಡಾಯಿಸಿ ತಂದೆ ಹಾಗೂ ಮಗುವನ್ನು ರಕ್ಷಿಸಿದ್ದಾರೆ.

ಮಗು ಎತ್ತಿಕೊಂಡು ಸೇತುವೆ ಮೇಲೆ ನಿಂತಿದ್ದ ವ್ಯಕ್ತಿಯನ್ನು ಕೆಳಗಿಳಿಸಿ ರಕ್ಷಿಸಿ ಬುದ್ಧಿವಾದ ಹೇಳಿದ್ದಾರೆ. ಕೈಕಂಬ ನಿವಾಸಿ ಸಂದೀಪ್ ಆತ್ಮಹತ್ಯೆಗೆ ಯತ್ನಿಸಿದವರು. ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದರ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular