HomeLatest NewsBIG NEWS: ನಿರಂತರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ: ಪ್ರವಾಹದಂತೆ ಮನೆಗೆ ನುಗ್ಗಿದ ನೀರು

BIG NEWS: ನಿರಂತರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ: ಪ್ರವಾಹದಂತೆ ಮನೆಗೆ ನುಗ್ಗಿದ ನೀರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ರಣಮಳೆ ಪ್ರಾರಂಭವಾಗಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಕಂಕನಾಡಿ ಬಳಿಯ ಸುವರ್ಣ ಲೇನ್ ಸಮೀಪದ ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಅವಘಡ ಸಂಭವಿಸಿದೆ. ಕಾಂಪೌಂಡ್ ಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಪ್ರವಾಹದಂತೆ ನೀರು ಮನೆಗೆ ನುಗ್ಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಪೌಂಡ್ ಬಿದ್ದ ರಭಸಕ್ಕೆ ಕಬ್ಬಿಣದ ಗೇಟ್ ಕಿತ್ತು ಹೋಗಿದೆ. ಮನೆಗಳಿಗೆ ನೀರು ನುಗ್ಗಿದೆ. ಇದೇ ವೇಳೆ ವಿದ್ಯುತ್ ಕಂಬದಿಂದ ಕಿಡಿಗಳು ಹೊತ್ತಿಕೊಂಡಿವೆ. ಅದೃಷ್ಟವಶಾತ್
ಜೋಕಿಂ ಡಿಸೋಜಾ ಕುಟುಂಬ ಅಪಾಯದಿಂದ ಪಾರಾಗಿದೆ. ಈ ಭೀಕರ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular