HomeLive Newsಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಅಂತವರ ವಿರುದ್ಧ ಕಠಿಣ ಕ್ರಮ: ದಕ್ಷಿಣ ಕನ್ನಡ ಎಸ್ ಪಿ ಕೆ.ಅರುಣ್...

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಅಂತವರ ವಿರುದ್ಧ ಕಠಿಣ ಕ್ರಮ: ದಕ್ಷಿಣ ಕನ್ನಡ ಎಸ್ ಪಿ ಕೆ.ಅರುಣ್ ಎಚ್ಚರಿಕೆ!

ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಯುಂಟು ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ದಕ್ಷಿಣ ಕನ್ನಡ ಎಸ್ ಪಿ ಕೆ.ಅರುಣ್ ಎಚ್ಚರಿಕೆ ನೀಡಿದ್ದಾರೆ.

ಕಡಬ ಪೊಲೀಸ್ ಠಾಣೆ ಬಳಿ ಕೆಲವರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಎಸ್ ಪಿ ಅರುಣ್, ಮಂಗಳೂರುನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಕೆಲ ಹತ್ಯೆಗಳಿಂದಾಗಿ ತಿಂಗಳಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹತ್ತು ವರ್ಷಗಳ ಈಚೆಗೆ ನಡೆದಿರುವ ಇಂತಹ ಹತ್ಯೆಗಳನ್ನು ವಿಶೇಷಿಸಿದಾಗ ಅವುಗಳ ಆರೋಪಿಗಳು ಕೋಮುವಾದಿ ಸಂಘಟನೆಗಳ ಸಂಪರ್ಕದಲ್ಲಿ ಇರುವುದು ಕಂಡುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೋಮುವಾದಿ ಸಂಘಟನೆಗಳು ಮುಖಂಡರ ಪಟ್ಟಿ ತಯಾರಿಸಿ, ಅವರ ದೈನಂದಿನ ಚಟುವಟಿಕೆ ಹಾಗೂ ಅವರು ಎಲ್ಲೆಲ್ಲಿ ಇರುತ್ತಾರೆ ಎಂಬ ಬಗ್ಗೆ ಪರಿಶೀಲಿಸಲು ಕ್ರಮ ವಹಿಸಿದ್ದೆವು. ಈ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೆಲವರು ಕಡಬ ಪೊಲೀಸ್ ಠಾಣೆ ಮುಂದೆ ಅಕ್ರಮವಾಗಿ ಗುಂಪು ಸೇರಿ ಪ್ರತಿಭಟನೆ ಮಾಡಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

ಕಡಬ ಠಾಣೆ ಮುಂದೆ ಪ್ರತಿಭಟನೆ ನಡೆಸಿದವರು ಅವರ ಕುಟುಂಬ ಸದಸ್ಯರನ್ನೂ ಕರೆತಂದು ಪ್ರತಿಭಟಿಸುವುದಾಗಿ ಹೇಳಿದ್ದಾರೆ. ಹಾಗೆ ಮಾಡಿದರೆ ಕುಟುಂಬ ಸದಸ್ಯರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋಮುವಾದಿ ಸಂಘಟನೆಗಳ ಮುಖಂಡರ ಚಲನವಲನ ಗಮನಿಸುವ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಮುಂದೆಯೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular