HomeKarnatakaBREAKING NEWS: ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ; ಆರೋಪಿ ಅರೆಸ್ಟ್

BREAKING NEWS: ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ; ಆರೋಪಿ ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ದ್ವಿತಿಯ ಪಿಯುಸಿಯ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಕೇರಳ ಮೂಲದ ಅಬೀನ್ ಎಂದು ಗುರುತಿಸಲಾಗಿದೆ. ಕಡಬದ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಬಂದಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಕಿರಾತಕ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ. ಕಾಲೇಜು ಆವರಣದಲ್ಲಿಯೇ ಈ ಘಟನೆ ನಡೆದಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಗಾಯಗಳಾಗಿದ್ದು, ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular