BREAKING NEWS: ಪೊಲೀಸ್ ಠಾಣೆ ಪಕ್ಕದಲ್ಲಿಯೇ ಘೋರ ಘಟನೆ; ನಡುರಸ್ತೆಯಲ್ಲೇ ಯುವತಿಯ ಕುತ್ತಿಗೆ ಇರಿದು ದುಷ್ಕರ್ಮಿ ಪರಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಘೋರ ಘಟನೆ ನಡೆದಿದೆ. ಯುವತಿಯ ಮೇಲೆ ದುಷ್ಕರ್ಮಿಯೊಬ್ಬ ಹಾಡ ಹಗಲೇ ನಡುರಸ್ತೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.

ರಸ್ತೆಯಲ್ಲಿ ಬರುತ್ತಿದ್ದ ಯುವತಿಯ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಯೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಯುವತಿಯ ಕುತ್ತಿಗೆಗೆ 3-4 ಬಾರಿ ಇರಿದು ಪರಾರಿಯಾಗಿದ್ದಾನೆ. ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲಿಯೇ ಈ ಘಟನೆ ನಡೆದಿದೆ.

ಗಂಭೀರವಾಗಿ ಗಾಯಗೊಂಡಿರುವ ಯುವತಿ ರಸ್ತೆಯಲ್ಲಿಯೇ ಬಿದ್ದಿದ್ದಾಳೆ. ಹಲ್ಲೆಗೊಳಗಾದ ಯುವತಿಯನ್ನು ಗೌರಿ ಎಂದು ಗುರುತಿಸಲಾಗಿದೆ. ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read