HomeKarnatakaBREAKING NEWS: ಪೊಲೀಸ್ ಠಾಣೆ ಪಕ್ಕದಲ್ಲಿಯೇ ಘೋರ ಘಟನೆ; ನಡುರಸ್ತೆಯಲ್ಲೇ ಯುವತಿಯ ಕುತ್ತಿಗೆ ಇರಿದು ದುಷ್ಕರ್ಮಿ...

BREAKING NEWS: ಪೊಲೀಸ್ ಠಾಣೆ ಪಕ್ಕದಲ್ಲಿಯೇ ಘೋರ ಘಟನೆ; ನಡುರಸ್ತೆಯಲ್ಲೇ ಯುವತಿಯ ಕುತ್ತಿಗೆ ಇರಿದು ದುಷ್ಕರ್ಮಿ ಪರಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಘೋರ ಘಟನೆ ನಡೆದಿದೆ. ಯುವತಿಯ ಮೇಲೆ ದುಷ್ಕರ್ಮಿಯೊಬ್ಬ ಹಾಡ ಹಗಲೇ ನಡುರಸ್ತೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.

ರಸ್ತೆಯಲ್ಲಿ ಬರುತ್ತಿದ್ದ ಯುವತಿಯ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಯೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಯುವತಿಯ ಕುತ್ತಿಗೆಗೆ 3-4 ಬಾರಿ ಇರಿದು ಪರಾರಿಯಾಗಿದ್ದಾನೆ. ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲಿಯೇ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಭೀರವಾಗಿ ಗಾಯಗೊಂಡಿರುವ ಯುವತಿ ರಸ್ತೆಯಲ್ಲಿಯೇ ಬಿದ್ದಿದ್ದಾಳೆ. ಹಲ್ಲೆಗೊಳಗಾದ ಯುವತಿಯನ್ನು ಗೌರಿ ಎಂದು ಗುರುತಿಸಲಾಗಿದೆ. ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular