HomeKarnatakaBIG NEWS: ನಡುರಸ್ತೆಯಲ್ಲೇ ಚಾಕು ಇರಿದು ಯುವತಿಯ ಬರ್ಬರ ಹತ್ಯೆ; ಆರೋಪಿ ಅರೆಸ್ಟ್

BIG NEWS: ನಡುರಸ್ತೆಯಲ್ಲೇ ಚಾಕು ಇರಿದು ಯುವತಿಯ ಬರ್ಬರ ಹತ್ಯೆ; ಆರೋಪಿ ಅರೆಸ್ಟ್

ಮಂಗಳೂರು: ನಡುರಸ್ತೆಯಲ್ಲಿಯೇ ಹಾಡ ಹಗಲೇ ಯುವತಿಗೆ ಚಾಕು ಇರಿದು ಹತ್ಯೆಗೈದಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

18 ವರ್ಷದ ಯುವತಿ ಗೌರಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿ ಯುವತಿಯ ಕುತ್ತಿಗೆಗೆ ಚಾಕುವಿನಿಂದ 3-4 ಬಾರಿ ಇರಿದು ಪರಾರಿಯಾಗಿದ್ದ. ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ರಸ್ತೆಯಲ್ಲಿಯೇ ಪ್ರಜ್ಞಾಹೀನವಾಗಿ ಬಿದ್ದಿದ್ದಳು. ಪುತ್ತೂರಿನ ಮಹಿಳಾ ಪೊಲೀಸ್ ಠಾಣೆ ಪಕ್ಕದಲ್ಲೇ ಈ ಘಟನೆ ನಡೆದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೆಲ ಹೊತ್ತಲ್ಲೇ ಕೊನೆಯುಸಿರೆಳೆದಿದ್ದಳು. ಘಟನೆ ನಡೆದ ಕೆಲ ಗಂಟೆಗಳಲ್ಲೇ ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ. ಯಾವ ಕಾರಣಕ್ಕೆ ಯುವತಿಯನ್ನು ಇರಿದು ಹತ್ಯೆಗೈದಿದ್ದಾನೆ ಎಂಬುದು ವಿಚಾರಣೆಯಿಂದಷ್ಟೇ ತಿಳಿಯಬೇಕಿದೆ.

For Latest News Updates, Join Our Whatsapp Community🚩
RELATED ARTICLES

Most Popular