HomeKarnatakaಕಾಲುಸಂಕ ದಾಟುತ್ತಿದ್ದಾಗ ಕಾಲು ಜಾರಿ ಹಳ್ಳಕ್ಕೆ ಬಿದ್ದ ವ್ಯಕ್ತಿ ನಾಪತ್ತೆ

ಕಾಲುಸಂಕ ದಾಟುತ್ತಿದ್ದಾಗ ಕಾಲು ಜಾರಿ ಹಳ್ಳಕ್ಕೆ ಬಿದ್ದ ವ್ಯಕ್ತಿ ನಾಪತ್ತೆ

ಮಂಗಳೂರು: ಕಾಲುಸಂಕ ದಾಟುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಕಾಲು ಜಾರಿ ಹಳ್ಳಕ್ಕೆ ಬಿದ್ದು ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ಪಾಂಚಕೋಡಿ ಎಂಬಲ್ಲಿ ನಡೆದಿದೆ.

ಪಾಂಚಕೋಡಿ ನಿವಾಸಿ ಜೀವನ್ ಪಿಂಟೊ (48) ನಾಅಪತ್ತೆಯಾಅಗಿರುವ ವ್ಯಕ್ತಿ. ಜೀವನ್ ಪಿಂಟೊ ತಮ್ಮ ನಿವಾಸದಿಂದ ಸ್ವಲ್ಪವೇ ದೂರದಲ್ಲಿರುವ ಮಾವನ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ದಾರಿ ಮಧ್ಯೆ ಹಳ್ಳಕ್ಕೆ ಅಳವಡಿಸಲಾಗಿದ್ದ ಕಾಲುಸಂಕದ ಮೇಲೆ ಸಾಗುವಾಗ ಆಕಸ್ಮಿಕವಾಗಿ ಜಾರಿ ನೀರಿಗೆ ಬಿದ್ದಿದ್ದಾರೆ.

ಕಾಲುವೆಯಲ್ಲಿ ಚಪ್ಪಲಿ ಹಾಗೂ ಟಾರ್ಚ್ ಪತ್ತೆಯಾಗಿದ್ದು, ಅವರು ನೀರಿನಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆಯಿದೆ. ಘಟನೆ ನಡೆದ ಸಮಯದಲ್ಲಿ ಭಾರಿ ಮಳೆ ಸುರಿಯುತ್ತಿದ್ದ ಕಾರಣ ಹಳ್ಳ ತುಂಬಿ ಹರಿಯುತ್ತಿತ್ತು. ನೀರಿನ ರಭಸಕ್ಕೆ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಷಯ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಶೋಧ ನಡೆಸಿದ್ದಾರೆ. ಆದರೆ ಈವರೆಗೂ ವ್ಯಕ್ತಿಯ ಸುಳಿವು ಸಿಕ್ಕಿಲ್ಲ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular