ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎರ್ಮಾಯಿ ಫಾಲ್ಸ್ ಬಳಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎರ್ಮಾಯಿ ಫಾಲ್ಸ್ ಬಳಿಯ ಕಾಡಿನಲ್ಲಿಈ ಘಟನೆ ನಡೆದಿದೆ. ಬಂಧಿತರನ್ನು ಬೆಳ್ತಂಗಡಿಯ ಕಡಿರುದ್ಯಾವರ ನಿವಾಸಿ ಸುಮಂತ್ (28) ಮತ್ತು ಗರ್ಡಾಡಿ ನಿವಾಸಿ ನವನೀತ್ (26) ಎಂದು ಗುರುತಿಸಲಾಗಿದೆ.
ಏಪ್ರಿಲ್ 16 ರಂದು ಬಾಲಕಿಯನ್ನು ಕಾಡಿಗೆ ಕರೆದೊಯ್ದು ದುಷ್ಕೃತ್ಯವೆಸಗಲಾಗಿದೆ. ಸಂತ್ರಸ್ತ ಬಾಲಕಿ ಪೋಷಕರಿಗೆ ವಿಷಯ ತಿಖಿಸಿದ್ದು, ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೋಕ್ಸೋ ಪ್ರಕರಣದ ಅಡಿ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು, ಸದ್ಯ ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ತನಿಖೆ ಮುಂದುವರೆದಿದೆ.

