HomeKarnatakaBIG UPDATE: ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ವಿಕೃತಿ; ಆರೋಪಿ ಪತಿ ಅರೆಸ್ಟ್

BIG UPDATE: ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ವಿಕೃತಿ; ಆರೋಪಿ ಪತಿ ಅರೆಸ್ಟ್

ಮಂಗಳೂರು: ಕುಡುಕ ಪತಿ ಮಹಾಶಯನೊಬ್ಬ ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಧರ್ಮಸ್ಥಳ ಪೊಲಿಸರು ಬಂಧಿಸಿದ್ದಾರೆ.

55 ವರ್ಷದ ಸುರೇಶ್ ಗೌಡ ಬಂಧಿತ ಆರೋಪಿ. ಕಂಠಪೂರ್ತಿ ಕುಡಿದು ಬಂದಿದ್ದ ಸುರೇಶ್ ಗೌಡ ಪತ್ನಿ ಮೋಹಿನಿ ಕಣ್ಣು ಕಚ್ಚಿ ಮಾಂಸಹೊರಬರುವಂತೆ ವಿಕೃತಿ ಮೆರೆದಿದ್ದ. ಅಲ್ಲದೇ ಬಿಡಿಸಲು ಬಂದಿದ್ದ ಮಗಳ ಮೇಲೆಯೂ ಹಲ್ಲೆ ನಡೆಸಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸುರೇಶ್ ಗೌಡ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ನಾಪತ್ತೆಯಾಗಿದ್ದ.

ಇದೀಗ ಆರೋಪಿ ಸುರೇಶ್ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸುರೇಶ್ ಗೌಡ ಬೆಳ್ತಂಗಡಿ ತಾಲೂಕಿನ ಶಿಶಿಲದ ತನ್ನ ಮನೆಯ ತೋಟದಲ್ಲಿ ಅಡಗಿ ಕುಳಿತಿದ್ದ. ಆರೋಪಿಯನ್ನು ಬಂಧಿಸಿರುವ ಪೊಲಿಸರು ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular