HomeKarnatakaವಾಯುಭಾರ ಕುಸಿತ ಹಿನ್ನೆಲೆ ನಾಳೆಯಿಂದ 4 ದಿನ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ...

ವಾಯುಭಾರ ಕುಸಿತ ಹಿನ್ನೆಲೆ ನಾಳೆಯಿಂದ 4 ದಿನ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು:  ವಾಯುಭಾರ ಕುಸಿತ ಉಂಟಾದ ಪರಿಣಾಮ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 28ರ ನಾಳೆಯಿಂದ ಅಕ್ಟೋಬರ್ 1 ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಚಾಮರಾಜನಗರ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ತುಮಕೂರು, ಶಿವಮೊಗ್ಗ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ವಿಜಯನಗರ, ಬಳ್ಳಾರಿ, ದಾವಣಗೆರೆ ಭಾಗದಲ್ಲಿ ಮಳೆಯಾಗಲಿದೆ.

ಸೆಪ್ಟೆಂಬರ್ 28ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆಪ್ಟೆಂಬರ್ 29ರಂದು ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಕ್ಟೋಬರ್ 1ರವರೆಗೆ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಾಲಿನ ದರ 12 ರೂ. ಹೆಚ್ಚಳಕ್ಕೆ ಬೇಡಿಕೆ: ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರ ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಫ್ರೀಡಂ ಪಾರ್ಕ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ. ಹಾಲಿನ ದರ ಏರಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ನನ್ನನ್ನು ಭೇಟಿಯಾಗಿ 12 ರೂ. ಹೆಚ್ಚಳ ಮಾಡಿ. ಅದರಲ್ಲಿ 2 ರೂ. ಸಂಘಗಳಿಗೆ ಕೊಡಿ ಎಂದು ಮನವಿ ಮಾಡಿದ್ದಾರೆ. ನೆರೆಯ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿಗಳನ್ನು ಪಡೆದು, ಪರಿಶೀಲಿಸಿದ ನಂತರ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಹಾಲಿನ ಪ್ರಸ್ತುತ ದರದಿಂದ ಸಂಘಗಳಿಗೆ ನಷ್ಟವಾಗುತ್ತಿದೆ. ಬೆಲೆ ವಿಚಾರದಲ್ಲಿ ರೈತರಲ್ಲಿ ಆಕ್ರೋಶವಿದೆ. 50 ಸಾವಿರ ಹಾಲು ಉತ್ಪಾದಕರು ಹಾಲಿನ ದರ ಏರಿಕೆಗೆ ಆಗ್ರಹಿಸಿದ್ದಾರೆ. ರೈತರನ್ನು ಹಾಗೂ ಒಕ್ಕೂಟಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯಂತೆ, ರಾಜ್ಯದಲ್ಲಿ ಹಾಲಿನ ದರ ಹೆಚ್ಚಳದ ಕುರಿತು ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಪ್ರತಿ ಲೀಟರ್‌ಗೆ ₹12 ಹೆಚ್ಚಳ ಮಾಡುವಂತೆ ಮನವಿ ಮಾಡಿದ್ದಾರೆ. ಈ ಪ್ರಸ್ತಾವನೆಯನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹಾಲಿನ ದರ ₹12 ಹೆಚ್ಚಳಕ್ಕೆ ಬೇಡಿಕೆ

ಹಾಲಿನ ದರ ಏರಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜ್ಯದ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಪ್ರತಿ ಲೀಟರ್‌ಗೆ ₹12 ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಈ ₹12ರಲ್ಲಿ ₹2 ಅನ್ನು ಹಾಲು ಉತ್ಪಾದಕರ ಸಂಘಗಳಿಗೆ ನೀಡುವಂತೆ ಮನವಿ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular