HomeEntertainmentಡಾಲಿ ಧನಂಜಯ್ ಗೆ ಕೂಡಿಬಂತು ಕಂಕಣ ಭಾಗ್ಯ: ಫೆ. 16 ರಂದು ಮೈಸೂರಿನಲ್ಲಿ ಮನದನ್ನೆಯೊಂದಿಗೆ ಮದುವೆ

ಡಾಲಿ ಧನಂಜಯ್ ಗೆ ಕೂಡಿಬಂತು ಕಂಕಣ ಭಾಗ್ಯ: ಫೆ. 16 ರಂದು ಮೈಸೂರಿನಲ್ಲಿ ಮನದನ್ನೆಯೊಂದಿಗೆ ಮದುವೆ

ಖ್ಯಾತ ನಟ ಡಾಲಿ ಧನಂಜಯ್ ಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಶೀಘ್ರದಲ್ಲಿಯೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಚಿತ್ರದುರ್ಗ ಮೂಲದ ವೈದ್ಯೆಯೊಂದಿಗೆ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾಲಿ ಧನಂಜಯ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಪ್ರಸೂತಿ ತಜ್ಞರಾಗಿರುವ ಡಾ. ಧನ್ಯತಾ ವೈದ್ಯಕೀಯ ಪದವಿಯಲ್ಲಿ ರ್ಯಾಂಕ್ ಪಡೆದಿದ್ದಾರೆ. ಇಂಜಿನಿಯರಿಂಗ್ ಪದವಿಯಲ್ಲಿ ರ್ಯಾಂಕ್ ಪಡೆದ ಡಾಲಿ ಧನಂಝಯ್ ಕೂಡ ಪ್ರತಿಭಾವಂತರಾಗಿದ್ದಾರೆ.

ಕಳೆದು ಒಂದು ವರ್ಷದಿಂದ ಪರಸ್ಪರ ಪ್ರೀತಿಯಲ್ಲಿದ್ದ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದಾರೆ. ದೀಪಾವಳಿ ಮತ್ತು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಡಾಲಿ ಧನಂಜಯ್ ತಮ್ಮ ಮನದನ್ನೆಯನ್ನು ಸೋಷಿಯಲ್ ಮೀಡಿಯಾ ಮೂಲಕ ಪರಿಚಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗ ಮೂಲದ ಧನ್ಯತಾ ಅರಸೀಕೆರೆಯಲ್ಲಿ ಬೆಳೆದಿದ್ದಾರೆ. ಧನಂಜಯ ಅವರಿಗೆ ಹಳೆಯ ಪರಿಚಯವಿದ್ದರೂ ಸಾಮಾಜಿಕ ಜಾಲತಾಣದ ಮೂಲಕ ಮತ್ತೆ ಸಂಪರ್ಕಕ್ಕೆ ಬಂದು ಕಳೆದು ಒಂದು ವರ್ಷದಿಂದ ಪ್ರೀತಿಸಿದ್ದಾರೆ. ಇವರ ಪ್ರೀತಿಗೆ ಎರಡೂ ಮನೆಯವರು ಖುಷಿಯಿಂದ ಒಪ್ಪಿದ್ದು, ಫೆಬ್ರವರಿ 16 ರಂದು ಮೈಸೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

“ಪ್ರೀತಿಯ ಕರುನಾಡಿಗೆ,

ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ.

ಮದುವೆಗೆ ಕರಿತೀನಿ, ಎಲ್ಲ ಬಂದು ಊಟ ಮಾಡಿಕೊಂಡು ಹೋಗ್ಬೇಕು.

ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯಗಳು

ನಾನು ಧನ್ಯ ❤

ಇಂತಿ ನಿಮ್ಮವ”

ಎಂದು ಡಾಲಿ ಧನಂಜಯ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular